ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ. ಅದಕ್ಕೆ ಎಲ್ಲಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ಮೈಸೂರು ತಾಲೂಕಿನ ಮರಟಿ ಕ್ಯಾತನಹಳ್ಳಿ ಗ್ರಾಮದಲ್ಲಿ ಭಾನುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಶಾಶ್ವತ ಕುಡಿ ಯವ ನೀರು ಒದಗಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಕಬಿನಿ ನದಿಯಿಂದ ವಿಶೇಷವಾಗಿ ಹತ್ತಿರದ ಹಳ್ಳಿ ಗಳಿಗೆ ನೀರು ಒದಗಿಸಲಾಗುತ್ತಿದೆ. ಉಂಡು ವಾಡಿಯಿಂದಲೂ ನೀರು ಬರುತ್ತದೆ. ಮುಂದಿನ ವರ್ಷ ನೀರಿನ ಸಮಸ್ಯೆ ಬಗೆ ಹರಿಯಲಿದೆ ಎಂದು ಹೇಳಿದರು.
ಕ್ಷೇತ್ರದ ನೀರಿನ ಸಮಸ್ಯೆಗೆ ಸಂಬಂ ಧಿಸಿದಂತೆ ಐದಾರು ವರ್ಷದಿಂದ ಹೋರಾಟ ನಡೆಸಿ, ಸಂಪುಟ ಸಭೆ ಯಿಂದ ಮಂಜೂರಾತಿ ದೊರಕಿಸಿ, ಟೆಂಡರ್ ಕೂಡ ಆಗಿದೆ. ಭೂ ಸ್ವಾಧೀನ ಪ್ರಕ್ರಿಯೆಯೂ ನಡೆದಿದೆ. ಶಾಶ್ವತ ಕುಡಿ ಯುವ ನೀರು ನೀಡಬೇಕೆಂಬುದು ತಮ್ಮ ಗುರಿ ಎಂದು ಹೇಳಿದರು.
ಅಷ್ಟೇ ಅಲ್ಲದೆ, ಕ್ಷೇತ್ರ ವ್ಯಾಪ್ತಿಯ ಎಲ್ಲಾ ಕೆರೆ ಕಟ್ಟೆಗಳಿಗೂ ನೀರು ತುಂಬಿಸಲಾಗು ವುದು. ಲಿಂಗಾಂಬುದಿ ಕೆರೆ ಸೇರಿದಂತೆ ಇನ್ನಿತರ ಕೆರೆಗಳಿಗೆ ನೀರು ತುಂಬಿಸುವ ಪ್ರಯತ್ನ ನಡೆದಿದೆ. ಒಂದು ವರ್ಷದಲ್ಲಿ ಎಲ್ಲಾ ಕೆರೆಗಳು ತುಂಬಲಿವೆ. ಮುಂದಿನ ಬೇಸಿಗೆಯಲ್ಲಿ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಇರುವುದಿಲ್ಲ ಎಂದು ತಿಳಿಸಿದರು.
ಈಗ ಎಲ್ಲೆಲ್ಲಿ ನೀರಿನ ಕೊರತೆ ಕಂಡು ಬಂದಿದೆಯೋ ಅಂತಹ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸ ಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದ ಪ್ರತಾಪ ಸಿಂಹ, ಜಿಲ್ಲಾ ಪಂಚಾಯತ್ ಸದಸ್ಯ ಬೀರಿಹುಂಡಿ ಬಸವಣ್ಣ, ಮೈಸೂರು ತಾಲೂಕು ಪಂಚಾಯತಿ ಸದಸ್ಯೆ ನೇತ್ರಾ ವತಿ ವೆಂಕಟೇಶ್, ತಾಪಂ ಇಓ ಲಿಂಗ ರಾಜಯ್ಯ, ತಹಸೀಲ್ದಾರ್ ಜೆ.ಮಹೇಶ್, ಗ್ರಾಪಂ ಪಿಡಿಓ ರವಿಕುಮಾರ್, ಚಾಮುಂ ಡೇಶ್ವರಿ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಅರುಣ ಕುಮಾರ್‍ಗೌಡ, ಪ್ರಧಾನ ಕಾರ್ಯದರ್ಶಿ ಪೈಲ್ವಾನ್ ರವಿ, ಗೋಪಾಲಗೌಡ, ಹಿನಕಲ್ ಗ್ರಾಪಂ ಸದಸ್ಯೆ ನೇಹಾ ನೈನಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.