ಐಟಿ ದಾಳಿಯಿಂದ ನಮ್ಮನ್ನು ಕುಗ್ಗಿಸಲು ಸಾಧ್ಯವಿಲ್ಲ: ಹೆಚ್.ಡಿ.ರೇವಣ್ಣ
ಹಾಸನ

ಐಟಿ ದಾಳಿಯಿಂದ ನಮ್ಮನ್ನು ಕುಗ್ಗಿಸಲು ಸಾಧ್ಯವಿಲ್ಲ: ಹೆಚ್.ಡಿ.ರೇವಣ್ಣ

April 17, 2019

ಹಾಸನ: ಜೆಡಿಎಸ್ ಮುಖಂಡರ ಮತ್ತು ಕಾರ್ಯಕರ್ತರ ಮನೆ ಮೇಲೆ ಐಟಿ ದಾಳಿ ನಡೆಸುವ ಮೂಲಕ ನಮ್ಮನ್ನು ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದ್ದು, ಇಂತಹ ಗೊಡ್ಡು ಬೆದರಿಕೆಗೆಲ್ಲ ನಾವು ಹೆದರುವುದಿಲ್ಲ ಎಂದು ಜಿಲ್ಲಾ ಉಸ್ತು ವಾರಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದರು.

ನಗರದ ಖಾಸಗಿ ಹೋಟೆಲೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ನೋವು ಕೊಟ್ಟವರು ಯಾರೂ ಉಳಿಯುವುದಿಲ್ಲ. ಬಿಜೆಪಿಯವರು ಕಳೆದ ಹಲವು ದಿನಗಳಿಂದ ಆದಾಯ ತೆರಿಗೆ ಅಧಿಕಾರಿಗಳ ಮೂಲಕ ತಮ್ಮ ಮುಖಂಡರು ಹಾಗೂ ಕಾರ್ಯಕರ್ತರ ಮನೆ ಮೇಲೆ ದಾಳಿ ನಡೆಸುತ್ತಿದ್ದಾರೆ. ಇದಕ್ಕೆ ನಾವು ಬೆದರುವುದಿಲ್ಲ ಎಂದರು.

ಐಟಿ ಇಲಾಖೆಯಿಂದ ಸುಳ್ಳು ಕೇಸು ಹಾಕಿಸುವ ಮೂಲಕ ಬಿಜೆಪಿಯವರು ಕೀಳು ಮಟ್ಟದ ರಾಜಕಾರಣ ಮಾಡುತ್ತಿ ದ್ದಾರೆ. ಸೋಲುವ ಭೀತಿಯಿಂದ ಅವರು ನಮ್ಮ ಮುಖಂಡರನ್ನು ಕಟ್ಟಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.

ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ 3 ಲಕ್ಷ ಮತಗಳ ಅಂತರ ದಿಂದ ಗೆಲ್ಲುವ ವಿಶ್ವಾಸ ಇದೆ. ನಮ್ಮ ಕುಟುಂಬದ ಮೂರೂ ಮಂದಿ ಗೆಲುವು ಸಾಧಿಸುವುದು ಶತಃಸಿದ್ಧ. ನಿಖಿಲ್ ಕುಮಾರಸ್ವಾಮಿ ಸುಮಾರು 2 ಲಕ್ಷ ಮತ ಗಳ ಅಂತರದಿಂದ ಗೆಲುವು ಸಾಧಿಸಲಿ ದ್ದಾರೆ ಹಾಗೂ ತುಮಕೂರು ಕ್ಷೇತ್ರದಲ್ಲಿ ಹೆಚ್.ಡಿ. ದೇವೇಗೌಡರು 5 ಲಕ್ಷ ಮತ ಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿ ಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ರಾಜೇಗೌಡ, ವಕೀಲ ಜಯರಾಂ ಇತರರು ಉಪಸ್ಥಿತರಿದ್ದರು.

Translate »