ಸರ್ಕಾರಿ ಶಾಲಾ ಮಕ್ಕಳಿಗೆ ಸ್ಮಾರ್ಟ್ ತರಗತಿ ಆರಂಭಿಸಲು ಚಿಂತನೆ
ಮೈಸೂರು

ಸರ್ಕಾರಿ ಶಾಲಾ ಮಕ್ಕಳಿಗೆ ಸ್ಮಾರ್ಟ್ ತರಗತಿ ಆರಂಭಿಸಲು ಚಿಂತನೆ

December 28, 2020

ಶಿವಮೊಗ್ಗ, ಡಿ. 27- ಕೊರೊನಾ ಆತಂಕದ ನಡುವೆ ಶಾಲೆಗಳು ಇನ್ನೂ ಮಕ್ಕಳಿಗೆ ಆರಂಭ ವಾಗದಿರುವ ಸಂದರ್ಭ ದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆ ಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿದ ಸ್ಮಾರ್ಟ್ ಕ್ಲಾಸ್‍ಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ ನಗರದ ಪಾರ್ಕ್ ಬಡಾ ವಣೆಯ ಸರ್ಕಾರಿ ಆಂಗ್ಲ ಮತ್ತು ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಸ್ಮಾರ್ಟ್ ತರಗತಿಗಳನ್ನು ವೀಕ್ಷಿಸಿ ಮಾಧ್ಯಮ ಪ್ರತಿನಿಧಿಗಳೊಂ ದಿಗೆ ಮಾತನಾಡಿದರು. ಸರ್ಕಾರಿ ಶಾಲೆ ಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಮುಂದಿನ ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಗಳನ್ನು ಆರಂಭಿಸಿ ಉತ್ತಮ ವಾತಾ ವರಣವನ್ನು ಮಕ್ಕಳಿಗೆ ನಿರ್ಮಿಸಿ ಕೊಡ ಲಾಗುವುದು. ಈ ಸಂಬಂಧ ಶಿಕ್ಷಣ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.

 

 

Translate »