ಈ ಬಾರಿ ದಸರಾ ವಸ್ತು ಪ್ರದರ್ಶನದಲ್ಲಿ ಪ್ರತಿಯೊಂದಕ್ಕೂ ಪ್ರತ್ಯೇಕ ಟೆಂಡರ್
ಮೈಸೂರು

ಈ ಬಾರಿ ದಸರಾ ವಸ್ತು ಪ್ರದರ್ಶನದಲ್ಲಿ ಪ್ರತಿಯೊಂದಕ್ಕೂ ಪ್ರತ್ಯೇಕ ಟೆಂಡರ್

June 20, 2019

ಮೈಸೂರು: ಈ ಬಾರಿಯ ದಸರಾ ವಸ್ತು ಪ್ರದರ್ಶನ ಸಂಬಂಧ ಗ್ಲೋಬಲ್ ಟೆಂಡರ್ ಕೈ ಬಿಡಲು ಬುಧವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ಅಜೀಜ್ (ಅಬ್ದುಲ್ಲಾ) ತಿಳಿಸಿದರು.

ಮೈಸೂರಿನ ದಸರಾ ವಸ್ತು ಪ್ರದರ್ಶನ ಮೈದಾನ ದಲ್ಲಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದಲ್ಲಿ ರುವ ತಮ್ಮ ಕೊಠಡಿಯಲ್ಲಿ ಸಭೆ ನಡೆಸಿ ಬಳಿಕ `ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ಅವರು, ಮುಖ್ಯ ದ್ವಾರ, ವಾಣಿಜ್ಯ ಮಳಿಗೆಗಳು, ವಾಹನ ನಿಲುಗಡೆ, ಫುಡ್ ಕೋರ್ಟ್, ಅಮ್ಯೂಸ್‍ಮೆಂಟ್, ಆಟಿಕೆಗಳು ಹಾಗೂ ಜಾಹೀರಾತು ಸೇರಿದಂತೆ ಎಲ್ಲದಕ್ಕೂ ಪ್ರತ್ಯೇಕ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ ಎಂದರು.

ಈ ಹಿಂದೆ ವಿವಿಧ ಪ್ರದರ್ಶನ, ಮಳಿಗೆಗಳು ಹಾಗೂ ವಾಹನ ನಿಲುಗಡೆ ಮೊದಲಾದವುಗಳಿಗೆ ಸಂಬಂಧಿಸಿ ದಂತೆ ಒಂದೇ ಟೆಂಡರ್ ಅನ್ನು ಜಾಗತಿಕ ಮಟ್ಟದಲ್ಲಿ ಕರೆಯಲಾಗುತ್ತಿತ್ತು. ಇದರಿಂದ ಮೊತ್ತವೂ ಹೆಚ್ಚಿರುತ್ತಿದ್ದ ಹಿನ್ನೆಲೆಯಲ್ಲಿ ಸ್ಪರ್ಧೆ ಕಡಿಮೆ ಇರುತ್ತಿತ್ತು. ಇದೀಗ ಮೊತ್ತ ಕಡಿಮೆಯಾಗಲಿದ್ದು, ಇದರಿಂದ ಸ್ಥಳೀಯರಿಗೆ ಅವ ಕಾಶ ದೊರೆಯುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದರು.

ಮಳಿಗೆಗಳು ಸಕಾಲದಲ್ಲಿ ತೆರೆಯುವಂತಾಗಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ವಸ್ತು ಪ್ರದರ್ಶನವನ್ನು ಮೇಲ್ದರ್ಜೆಗೆ ಏರಿಸಿ ಪ್ರವಾಸಿ ಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳ ಮಾಸ್ಟರ್ ಪ್ಲಾನ್ ಸಂಬಂಧ ಪ್ರವಾ ಸೋದ್ಯಮ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿ ಅನುಮೋದನೆ ಪಡೆಯಲಾಗಿದೆ ಎಂದು ವಿವರಿಸಿದರು.

ಹಣಕಾಸು ಇಲಾಖೆ ಜಂಟಿ ಕಾರ್ಯದರ್ಶಿ ರಮೇಶ್, ವಸ್ತು ಪ್ರದರ್ಶನ ಪ್ರಾಧಿಕಾರದ ಸಿಇಓ ಬಿ.ಆರ್.ಗಿರೀಶ್, ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜೇಶ್, ವ್ಯಸ್ಥಾಪಕ ರೆಡ್ಡಪ್ಪ, ಪ್ರವಾ ಸೋದ್ಯಮ ಇಲಾಖೆ ಉಪನಿರ್ದೇಶಕ ಹೆಚ್.ಪಿ. ಜನಾರ್ಧನ್ ಸಭೆಯಲ್ಲಿ ಪಾಲ್ಗೊಂಡಿದ್ದರು.

Translate »