ಈ ಬಾರಿ ಮೈಸೂರು ದಸರಾ ಕಾರ್ಯಕ್ರಮಗಳು ವೈಶಿಷ್ಟ್ಯಪೂರ್ಣ, ಪಾರದರ್ಶಕ
ಮೈಸೂರು

ಈ ಬಾರಿ ಮೈಸೂರು ದಸರಾ ಕಾರ್ಯಕ್ರಮಗಳು ವೈಶಿಷ್ಟ್ಯಪೂರ್ಣ, ಪಾರದರ್ಶಕ

August 31, 2019

ಮೈಸೂರು,ಆ.30(ಎಂಟಿವೈ)- ನಾಡಹಬ್ಬ ದಸರಾ ಮಹೋತ್ಸವ ಪಾರಂಪರಿಕ ಆಚರಣೆ ಯಾಗಿದ್ದು, ನವರಾತ್ರಿಯ ವೇಳೆ ನಡೆಯುವ ಎಲ್ಲಾ ಕಾರ್ಯಕ್ರಮಗಳು ವೈಶಿಷ್ಟ್ಯ ಹಾಗೂ ಪಾರ ದರ್ಶಕವಾಗಿರುವಂತೆ ಆಚರಿಸಲು ಪಕ್ಷಾತೀತ ವಾಗಿ ಸಲಹೆ ಪಡೆಯು ತ್ತೇನೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ತಿಳಿಸಿದ್ದಾರೆ.

ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ದಲ್ಲಿಯೇ ಮೈಸೂರಿನಲ್ಲಿ ಮಾತ್ರ ಪಾರಂಪರಿಕ ದಸರಾ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಈ ಬಾರಿ ದಸರಾ ಮಹೋತ್ಸವ ಆಚರಿಸುವ ಹೊಣೆಗಾರಿಕೆ ನನಗೆ ಸಿಕ್ಕಿದೆ. ಸಾರ್ವಜನಿಕರು ಹಾಗೂ ಎಲ್ಲಾ ರಾಜಕೀಯ ಪಕ್ಷಗಳ ಜನರನ್ನು ಒಳಗೊಂಡಂತೆ ಎಲ್ಲರ ಸಹಕಾರ ಪಡೆದು ದಸರಾ ಮಹೋತ್ಸ ವದ ಯಶಸ್ಸಿಗೆ ಶ್ರಮಿಸುತ್ತಿದ್ದೇನೆ. ಈಗಾಗಲೇ ಹಲವು ಸಭೆ ನಡೆಸಿದ್ದೇನೆ. ದಸರಾ ಕಾಮಗಾರಿ ಆರಂಭ ವಾಗಿವೆ. ಪಾರದರ್ಶಕತೆಗೆ ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊ ಳ್ಳುವ ಕಲಾವಿದರು ಹಾಗೂ ಎಲ್ಲಾ ವ್ಯವಹಾರ ಗಳಿಗೂ ಚೆಕ್ ಮೂಲಕವೇ ಹಣ ನೀಡಲಾಗು ತ್ತದೆ. ದಸರಾ ಮುಗಿದ ನಂತರ ಖರ್ಚು ವೆಚ್ಚದ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದರು.

ದಸರಾ ಸಮಿತಿ ರಚನೆಗೆ ಸಂಸದ ಪ್ರತಾಪ್ ಸಿಂಹ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಪಾಲಿಕೆ ಸದಸ್ಯರು, ಜಿ.ಪಂ ಸದಸ್ಯರು, ಕಾಂಗ್ರೆಸ್, ಜೆಡಿಎಸ್ ಮುಖಂಡರನ್ನು
ಒಳಗೊಂಡಂತೆ ಸಮಿತಿಗಳನ್ನು ರಚಿಸಲಾಗುತ್ತದೆ. ಬುಧವಾರ ಅಥವಾ ಗುರುವಾರ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರೊಂದಿಗೆ ಸಭೆ ನಡೆಸಿ ದಸರಾ ಮಹೋತ್ಸವ ಯಶಸ್ಸಿಗೆ ಸಹಕಾರ ಕೋರುತ್ತೇನೆ ಎಂದು ತಿಳಿಸಿದರು. ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಸ್ತಬ್ಧಚಿತ್ರಗಳು ನವೀನತೆಯಿಂದ ಕೂಡಿರಬೇಕು. ಅದಕ್ಕಾಗಿ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಅವರಿಗೆ ಮಾಹಿತಿಯನ್ನು ಖುದ್ದಾಗಿ ನೀಡಲಿದ್ದೇನೆ ಎಂದರು.

ಚಾಮುಂಡಿಬೆಟ್ಟದ ದಾಸೋಹ ಭವನ ಚಿಕ್ಕದಾಗಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರವಾಸಿಗರು, ಭಕ್ತರು ಅಧಿಕ ಸಂಖ್ಯೆಯಲ್ಲಿ ಬೆಟ್ಟಕ್ಕೆ ಭೇಟಿ ನೀಡುತ್ತಿರುವುದರಿಂದ ಅದು ಸಾಕಾಗುತ್ತಿಲ್ಲ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ದಸರಾ ಮುಗಿದ ನಂತರ ಹೊಸದಾಗಿ ವಿಶಾಲವಾದ ದಾಸೋಹ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುತ್ತೇನೆ.

ಮೈಸೂರಿನ ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ, ಲ್ಯಾನ್ಸ್ ಡೌನ್ ಕಟ್ಟಡದ ಕಾಮಗಾರಿಗಳ ಬಗ್ಗೆ ದಸರಾ ಮುಗಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ. ಕಬಿನಿ ಜಲಾಶಯ ಭರ್ತಿಯಾಗಿದ್ದು ಬಾಗಿನ ಅರ್ಪಿಸುವ ಕಾರ್ಯಕ್ರಮ ಆಯೋಜನೆ ಮಾಡಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಸಂಸದ ಪ್ರತಾಪಸಿಂಹ, ಶಾಸಕ ಎಲ್.ನಾಗೇಂದ್ರ, ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಹೆಚ್.ಮಂಜು ನಾಥ್, ಮಾಜಿ ಸಚಿವ ಎಂ.ಶೀವಣ್ಣ, ಮುಖಂಡರಾದ ಹೆಚ್.ವಿ.ರಾಜೀವ್, ಎಂ.ವಿ.ರವಿಶಂಕರ್, ಶಿವಪ್ರಸಾದ್, ಕೇಬಲ್ ಮಹೇಶ್ ಹಾಗೂ ಇನ್ನಿತರರು ಇದ್ದರು.

Translate »