ಮೈಸೂರು: ಕರ್ನಾಟಕ, ತಮಿಳುನಾಡು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿದ್ದ ತ್ರಿಭಾಷಾ ಸೂತ್ರದಿಂದ ಮೇಲ್ನೋ ಟಕ್ಕಷ್ಟೇ ಹಿಂದಿ ಕಡ್ಡಾಯ ಪದವನ್ನು ಮಾತ್ರ ಹಿಂಪಡೆ ದಿದ್ದು, ಪರೋಕ್ಷವಾಗಿ ಹಿಂದಿ ಕಲಿಕೆಗೆ ಸಂಚು ರೂಪಿಸಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪೆÇ್ರ.ಎಸ್.ಜಿ.ಸಿದ್ದರಾಮಯ್ಯ ವಿಷಾದಿಸಿದ್ದಾರೆ.
ಮೈಸೂರಿನ ಕಲಾಮಂದಿರದಲ್ಲಿ ಭಾನುವಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯಲ್ಲಿ ಹಿಂದಿ ಕಲಿಕೆ ಕಡ್ಡಾಯಗೊಳಿ ಸಿತ್ತು. ತಮಿಳುನಾಡು ಮತ್ತು ಕನ್ನಡಿಗರ ಹೋರಾಟ ದಿಂದ ವಿವಾದಿತ ಹಿಂದಿ ಕಡ್ಡಾಯ ಅಂಶವನ್ನು ಹಿಂಪಡೆದಿದೆ. ಇದರಿಂದ ಕನ್ನಡ ಸೇರಿದಂತೆ ಇತರೆ ಪ್ರಾದೇಶಿಕ ಭಾಷೆಗಳಿಗೆ ಸುರಕ್ಷಿತವಾದ ವಾತಾವರಣವಿದೆ ಎಂದು ಭಾವಿಸಬಾರದು. ಕಡ್ಡಾಯ ಎಂಬ ಪದವನ್ನು ಹಿಂಪಡೆದಿರುವ ಕೇಂದ್ರ ಸರ್ಕಾರ ಪರೋಕ್ಷವಾಗಿ ಹಿಂದಿ ಹೇರುವ ತಂತ್ರಗಾರಿಕೆ ಅನುಸರಿಸುತ್ತಿದೆ. ಇದರ ವಿರುದ್ಧ ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು. ಈಗಾಗಲೇ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಇಂಗ್ಲಿಷ್ ಕಲಿಸಲಾಗುತ್ತಿದೆ. ದ್ವಿತೀಯ ಭಾಷೆಯಾಗಿ ಹಿಂದಿ, ತೃತೀಯ ಭಾಷೆಯಾಗಿ ಕನ್ನಡವನ್ನು ಕಲಿಸಲಾಗುತ್ತಿದೆ. ತೃತೀಯ ಭಾಷೆಯಾಗಿ ಕನ್ನಡ ಉಳಿಯುವುದೂ ಒಂದೇ ಉಳಿಯದೆ ಇರುವುದೂ ಒಂದೇ. ತೃತೀಯ ಭಾಷೆ ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎಂದಾ ಗುತ್ತದೆ. ಇಂತಹ ಸ್ಥಿತಿಯಲ್ಲಿ ಕನ್ನಡ ನೆಲದಲ್ಲಿ ಕನ್ನಡ ಉಳಿಯಲು ಸಾಧ್ಯವೇ? ಎಂದು ಪ್ರಶ್ನಿಸಿದರು.
ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾ ಗಿದ್ದಾಗ ರಾಜ್ಯದಲ್ಲಿ ಕನ್ನಡ ಭಾಷೆ ಉಳಿಸಲು ಅಂದಿನ ರಾಜ್ಯ ಸರ್ಕಾರ ಭಾಷಾ ನೀತಿ ಜಾರಿಗೆ ತಂದಿತ್ತು. ಈ ನೀತಿಗೆ ಆಂಗ್ಲ ಮಾಧ್ಯಮ ಶಾಲೆಗಳ ಆಡಳಿತ ಮಂಡಳಿಯಿಂದ ತೀವ್ರ ವಿರೋಧ ವ್ಯಕ್ತವಾಯಿತು. ಕನ್ನಡ ಕಲಿಕೆ ವಿರುದ್ಧ ಖಾಸಗಿ ಶಿಕ್ಷಣ ಸಂಸ್ಥೆಗಳು ಧ್ವನಿ ಎತ್ತಿದವು. ಇದೆಲ್ಲವನ್ನು ನೋಡಿದರೆ ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಉಳಿಯಲು ಸಾಧ್ಯವೇ ಎಂಬ ಪ್ರಶ್ನೆ ಕಾಡುತ್ತಿದೆ. ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಉಳಿಯದೆ ಇದ್ದರೆ ಮುಂದಿನ ದಿನಗಳಲ್ಲಿ ಆಡಳಿತದಲ್ಲೂ ಕನ್ನಡ ವನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಇದು ಕೇವಲ ಕನ್ನಡ ಭಾಷೆಯೊಂದಕ್ಕೆ ಒದಗಿರುವ ಸಂಕಷ್ಟವಲ್ಲ, ದೇಶದ ಹಿಂದಿಯೇತರ ಎಲ್ಲ ಭಾಷೆಗಳು ಈ ಆತಂಕ ಎದುರಿಸುತ್ತಿವೆ ಎಂದರು.
ಕನ್ನಡ ನೆಲದಲ್ಲಿ ಕನ್ನಡ ಭಾಷೆ ಸಂಕಷ್ಟದಲ್ಲಿ ರುವ ಸಂದರ್ಭದಲ್ಲಿಯೇ ರಾಜ್ಯ ಸರ್ಕಾರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿ ಸುತ್ತಿದೆ. ಇದು ರಾಷ್ಟ್ರಕವಿ ಕುವೆಂಪು ಅವರ ಆಶಯಕ್ಕೆ ವಿರುದ್ಧವಾಗಿದೆ. ಪ್ರಾಥಮಿಕ ಹಂತದ ಶಿಕ್ಷಣವನ್ನು ಮಕ್ಕಳ ಮಾತೃಭಾಷೆಯಲ್ಲಿ ನೀಡಿದಾಗ ಮಾತ್ರ ಕಲಿಕಾ ಹಾಗೂ ಬುದ್ಧಿವಂತಿಕೆ ಸಾಮಥ್ರ್ಯ ಹೆಚ್ಚಾಗುತ್ತದೆ. ಪ್ರಾಥಮಿಕ ಹಂತದಲ್ಲಿ ಬೇರೆ ಭಾಷೆ ಕಲಿಸುವ ಪ್ರಯತ್ನ ಮಾಡಿದರೆ ಒತ್ತಡ ಉಂಟಾಗಿ ಕಲಿಕೆಯೊಂದಿಗೆ ಬುದ್ಧಿವಂತಿಕೆ ಶಕ್ತಿ ಕುಂಠಿತವಾಗು ತ್ತದೆ. ಈ ಪರಿಸ್ಥಿತಿಯಲ್ಲಿ ನಮಗೆ ನಾಡಗೀತೆ ಹಾಡುವ ನೈತಿಕ ಅಧಿಕಾರವಿದೆಯೇ ಎಂದು ಪ್ರತಿಯೊ ಬ್ಬರೂ ಆತ್ಮಾವಲೋಕನ ಮಾಡಿಕೊಳ್ಳಬೇಕೆಂದರು.
ಶಾಸಕ ಎಲ್.ನಾಗೇಂದ್ರ ಮಾತನಾಡಿ, ರಾಜ ಧಾನಿ ಬೆಂಗಳೂರಿನಲ್ಲಿ ಕನ್ನಡಿಗರ ಸಂಖ್ಯೆ ಶೇ.27ಕ್ಕೆ ಇಳಿಕೆಯಾಗಿರುವುದು ಕಳವಳಕಾರಿ ಸಂಗತಿ. ಬೆಂಗಳೂರಿನಲ್ಲಿ ಕನ್ನಡ ಭಾಷೆಯನ್ನು ಕೇಳುವುದೇ ಕಷ್ಟವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಕನ್ನಡದ ಬೆಳವಣಿಗೆಗೆ ಸರ್ಕಾರ ಸಾಧ್ಯವಾದಷ್ಟು ಕೊಡುಗೆಗಳನ್ನು ನೀಡಬೇಕೆಂದು ಒತ್ತಾಯಿಸಿದರು.
321 ವಿದ್ಯಾರ್ಥಿಗಳಿಗೆ ಪುರಸ್ಕಾರ: ಕಾರ್ಯ ಕ್ರಮದಲ್ಲಿ ಮೈಸೂರು ವಿಭಾಗದ ಎಂಟು ಜಿಲ್ಲೆ ಗಳಲ್ಲಿ ತಾಲೂಕು ಮಟ್ಟದಲ್ಲಿ ಎಸ್‍ಎಸ್‍ಎಲ್‍ಸಿ ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ 171, ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ 150 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 321 ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಪುರಸ್ಕಾರವು ಪ್ರಥಮ 10,000 ರೂ., ದ್ವಿತೀಯ 9,000 ರೂ., ತೃತೀಯ 8,000 ರೂ. ಹಾಗೂ ಪ್ರಾಧಿಕಾರದ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸಾಹಿತಿ ಪೆÇ್ರ.ಸಿ.ಪಿ. ಕೃಷ್ಣಕುಮಾರ್, ವಿಧಾನ ಪರಿಷತ್ ಸದಸ್ಯ ಆರ್. ಧರ್ಮಸೇನ, ಮೇಯರ್ ಪುಷ್ಪಲತಾ ಜಗನ್ನಾಥ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳ ಶ್ಯಾಮ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಕಾಳಮ್ಮ ಕೆಂಪ ರಾಮಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ.ಮುರುಳಿಧರ, ಡಿಡಿಪಿಐ ಪಾಂಡುರಂಗ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಚೆನ್ನಪ್ಪ, ಪ್ರಾಧ್ಯಾ ಪಕಿ ಡಾ.ಎಂ.ಪಿ ರೇಖಾ ವಸಂತ್, ಕನ್ನಡ ಅಭಿ ವೃದ್ಧಿ ಪ್ರಾಧಿಕಾರದ ಸದಸ್ಯರಾದ ಗಿರೀಶ್ ಪಟೇಲ್, ಪ್ರಭಾಕರ್ ಪಾಟೀಲ್ ಇತರರು ಇದ್ದರು.