ಮೈಸೂರು ಜಿಲ್ಲಾಸ್ಪತ್ರೆ ಆವರಣದಲ್ಲಿ ಸಾವಿರ  ಎಲ್‍ಪಿಎಂ ಆಕ್ಸಿಜನ್ ಜನರೇಟರ್ ಪ್ಲಾಂಟ್ ಸ್ಥಾಪನೆ
ಮೈಸೂರು

ಮೈಸೂರು ಜಿಲ್ಲಾಸ್ಪತ್ರೆ ಆವರಣದಲ್ಲಿ ಸಾವಿರ ಎಲ್‍ಪಿಎಂ ಆಕ್ಸಿಜನ್ ಜನರೇಟರ್ ಪ್ಲಾಂಟ್ ಸ್ಥಾಪನೆ

June 22, 2021

ಮೈಸೂರು,ಜೂ.21(ಪಿಎಂ)- ಮೈಸೂರಿನ ಮೇಟ ಗಳ್ಳಿಯ ಕೆಆರ್‍ಎಸ್ ರಸ್ತೆಯಲ್ಲಿರುವ ಜಿಲ್ಲಾಸ್ಪತ್ರೆ ಆವ ರಣದಲ್ಲಿ ಸಾವಿರ ಎಲ್‍ಪಿಎಂ (ಲೀಟರ್ ಪರ್ ಮಿನಿಟ್) ಸಾಮಥ್ರ್ಯದ ಆಕ್ಸಿಜನ್ ಜನರೇಟರ್ ಪ್ಲಾಂಟ್ ಸ್ಥಾಪಿಸುವ ಸಂಬಂಧ ಸೋಮವಾರ ಸಂಸದ ಪ್ರತಾಪ್ ಸಿಂಹ ಸ್ಥಳ ಪರಿಶೀಲನೆ ನಡೆಸಿದರು.

ಬಳಿಕ `ಮೈಸೂರು ಮಿತ್ರ’ನೊಂದಿಗೆ ಮಾತ ನಾಡಿದ ಸಂಸದರು, ಕೇಂದ್ರ ಸರ್ಕಾರದ ವತಿಯಿಂದ ಇಡೀ ದೇಶಾದ್ಯಂತ 1,200ಕ್ಕಿಂತಲೂ ಹೆಚ್ಚು ಪಿಎಸ್‍ಎ ತಂತ್ರಜ್ಞಾನ ಆಧಾರಿತ ಆಕ್ಸಿಜನ್ ಜನರೇಟರ್ ಪ್ಲಾಂಟ್ ಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಅದರ ಭಾಗವಾಗಿ ಮೈಸೂರಿನ ಕೆಆರ್ ಆಸ್ಪತ್ರೆ ಆವರಣ ಮತ್ತು ಜಿಲ್ಲಾಸ್ಪತ್ರೆ ಆವರಣದಲ್ಲಿ ತಲಾ ಒಂದು ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಆಕ್ಸಿಜನ್ ಜನರೇಟರ್ ಪ್ಲಾಂಟ್ ಸ್ಥಾಪನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕೆಆರ್ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಜನರೇಟರ್ ಪ್ಲಾಂಟ್ ನಿರ್ಮಾಣ ಸಂಬಂಧ ಕಳೆದ 15 ದಿನಗಳ ಹಿಂದೆ ಸ್ಥಳ ಪರಿಶೀಲನೆ ನಡೆಸಿದ್ದೆ. ಇದೀಗ ಇದರ ಸಿವಿಲ್ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಈ ತಿಂಗಳ ಅಂತ್ಯದೊಳಗೆ ಅದರ ಕಾರ್ಯಾರಂಭಕ್ಕೆ ಚಾಲನೆ ನೀಡಲಾಗುವುದು. ಈ ಎರಡು ಪ್ಲಾಂಟ್‍ಗಳ ನಿರ್ಮಾಣ ಜವಾಬ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನೀಡಲಾಗಿದ್ದು, ಪ್ರಾಧಿಕಾರದ ಅಧೀಕ್ಷಕ ಇಂಜಿನಿಯರ್‍ಗಳೂ ಆದ ಮೈಸೂರು-ಬೆಂಗಳೂರು ಹೆದ್ದಾರಿ ನಿರ್ಮಾಣದ ಯೋಜನೆ ನಿರ್ದೇಶಕ ಬಿ.ಟಿ.ಶ್ರೀಧರ್ ನೇತೃತ್ವದಲ್ಲಿ ಪ್ಲಾಂಟ್‍ಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂದು ಹೇಳಿದರು.

ಜಿಲ್ಲಾಸ್ಪತ್ರೆ ಆವರಣದಲ್ಲಿ ಸಾವಿರ ಎಲ್‍ಪಿಎಂ ಸಾಮ ಥ್ರ್ಯದ ಆಕ್ಸಿಜನ್ ಜನರೇಟರ್ ಪ್ಲಾಂಟ್ ಸ್ಥಾಪಿಸುವ ಸಂಬಂಧ ಇಂದು ಸ್ಥಳ ಪರಿಶೀಲನೆ ನಡೆಸಿದ್ದು, ಜು.15 ಅಥವಾ 20ರೊಳಗೆ ಇಲ್ಲಿ ಪ್ಲಾಂಟ್ ಕಾರ್ಯಾ ರಂಭ ಮಾಡಲಿದೆ. ಜೊತೆಗೆ ಇದೇ ಮಾದರಿ ಆಕ್ಸಿ ಜನ್ ಪ್ಲಾಂಟ್ ಅನ್ನು ಕೊಡಗು ಜಿಲ್ಲಾಸ್ಪತ್ರೆ ಆವರಣ ದಲ್ಲೂ ನಿರ್ಮಿಸಲು ಉದ್ದೇಶಿಸಿದ್ದು, ಈ ಸಂಬಂಧ ನಾಳೆ ಸ್ಥಳ ಪರಿಶೀಲನೆ ನಡೆಸಲಿದ್ದೇನೆ ಎಂದು ಮಾಹಿತಿ ನೀಡಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿ ಕಾರದ ಅಧೀಕ್ಷಕ ಇಂಜಿನಿಯರ್ ಬಿ.ಟಿ.ಶ್ರೀಧರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ರಾಜೇಶ್ವರಿ, ಮೈಸೂರು ವೈದ್ಯಕೀಯ ಕಾಲೇಜಿನ ಡೀನ್ ಮತ್ತು ನಿರ್ದೇಶಕ ಡಾ.ಸಿ.ಪಿ. ನಂಜರಾಜ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Translate »