ಮಡಿಕೇರಿ: ಜಿಲ್ಲಾಡಳಿತ, ಪ್ರವಾಸೋದ್ಯಮ, ತೋಟ ಗಾರಿಕೆ ಹಾಗೂ ಪಶುಪಾಲನೆ ಇಲಾಖೆ
ಕೊಡಗು

ಮಡಿಕೇರಿ: ಜಿಲ್ಲಾಡಳಿತ, ಪ್ರವಾಸೋದ್ಯಮ, ತೋಟ ಗಾರಿಕೆ ಹಾಗೂ ಪಶುಪಾಲನೆ ಇಲಾಖೆ

January 9, 2019

ಸಹಯೋಗದಲ್ಲಿ ಜ.11 ರಿಂದ ಮೂರು ದಿನಗಳ ಕಾಲ ‘ಕೊಡಗು ಪ್ರವಾಸಿ ಉತ್ಸವ’ವು ನಗರದ ರಾಜಾಸೀಟು ಮತ್ತು ಗಾಂಧಿ ಮೈದಾನದಲ್ಲಿ ನಡೆಯ ಲಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ‘ಕೊಡಗು ಪ್ರವಾಸಿ ಉತ್ಸವ ಲಾಂಛನ’ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಜ.11 ರಂದು ಸಂಜೆ 4.30 ಗಂಟೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ‘ಕೊಡಗು ಪ್ರವಾಸಿ ಉತ್ಸವಕ್ಕೆ’ ಚಾಲನೆ ನೀಡಲಿದ್ದಾರೆ. ಫಲಪುಷ್ಪ ಪ್ರದರ್ಶನವನ್ನು ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ಉದ್ಘಾಟಿಸಲಿದ್ದಾರೆ. ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ. ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್.ಬೋಜೇಗೌಡ, ಆಯನೂರು ಮಂಜುನಾಥ್, ಜಿಪಂ ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜನವರಿ, 11 ರಂದು ಗಾಂಧಿ ಮೈದಾನದಲ್ಲಿ ಸಂಜೆ 5 ರಿಂದ 10 ಗಂಟೆಯವರೆಗೆ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 5.30 ಗಂಟೆಯಿಂದ 6.30 ರವರೆಗೆ ಕೊಡಗು ಸಾಹಿತ್ಯ ಅಕಾಡೆಮಿ ವತಿಯಿಂದ ಸಾಂಸ್ಕøತಿಕ ಕಾರ್ಯಕ್ರಮಗಳು, ಸಂಜೆ 6.30 ರಿಂದ 7.30 ರವರೆಗೆ ಎಂ.ಡಿ.ಪಲ್ಲವಿ ಮತ್ತು ತಂಡದವರಿಂದ ಜುಗಲ್ ಬಂದಿ, ಸಂಜೆ 7.30 ರಿಂದ 10 ಗಂಟೆಯವರೆಗೆ ಸರಿಗಮಪ ಲಿಟಲ್ ಚಾಂಪ್ಸ್ ಮಕ್ಕಳಾದ ಅಭಿನವ್, ಸುಪ್ರಿಯಾ ಜೋಷಿ, ಆಧ್ಯ, ಜ್ಞಾನೇಶ್, ಕೀರ್ತನಾ, ಪುಟ್ಟರಾಜು ಹೂಗಾರ್ ಇವರಿಂದ ಸಂಗೀತ ಸಂಜೆ ಹಾಗೂ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಖ್ಯಾತಿ ಮಕ್ಕಳಿಂದ ನೃತ್ಯ ವೈಭವ ನಡೆಯಲಿದೆ.

ಜ.12 ರಂದು ಸಂಜೆ 5.30 ರಿಂದ 5.45 ರವರೆಗೆ ಭಾರತೀಯ ವಿದ್ಯಾಭವನ, ಕೊಡಗು ವಿದ್ಯಾಲಯ ಶಿಕ್ಷಕರ ತಂಡದವರಿಂದ ನೃತ್ಯ, ಸಂಜೆ 5.45 ರಿಂದ 6.30 ರವರೆಗೆ ಹೇರಂಭ-ಹೇಮಂತ್ ಅವರಿಂದ ಕೊಳಲು ವಾದನ, ಸಂಜೆ 6.30 ರಿಂದ 10 ಗಂಟೆಯ ವರೆಗೆ ಸರಿಗಮಪ ಖ್ಯಾತಿಯ ಗಾಯಕರಾದ ಸುನೀಲ್, ಚನ್ನಪ್ಪ, ಶ್ರೀಹರ್ಷ, ಇಂಪನ, ಐಶ್ವರ್ಯ, ಸುಹಾನಾ, ಸೈಯದ್ ಅವರಿಂದ ಸಂಗೀತ ಸಂಜೆ, ನಂತರ ಸ್ಯಾಂಡಲ್‍ವುಡ್ ನೈಟ್ಸ್ ಧಾರಾವಾಹಿ ಕಲಾವಿದ ರಿಂದ ನೃತ್ಯ ವೈಭವ (ನಮ್ರತಾ (ಪುಟ್ಟಗೌರಿ ಮದುವೆ), ದೀಪಿಕಾ ದಾಸ್(ನಾಗಿಣಿ), ದೀಪಿಕಾ (ಕುಲವಧು), ಭೂಮಿಕಾ(ಕಿನ್ನರಿ).

ಜ.13 ರಂದು ಸಂಜೆ 5.30 ರಿಂದ 6.30 ರವರೆಗೆ ಅರೆಭಾಷೆ ಅಕಾಡೆಮಿ ವತಿಯಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30 ರಿಂದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತು ತಂಡದವರಿಂದ ಸಂಗೀತ ರಸ ಸಂಜೆ ವ್ಯಾಸರಾಜ್, ಅನುರಾಧ ಭಟ್, ಇಂದು ನಾಗರಾಜ್, ಲಕ್ಷ್ಮೀ ನಾಗರಾಜ್, ಸಂಜಿತ್ ಹೆಗ್ಡೆ, ಶ್ರೀನಿವಾಸ್ ಪಾಲ್ಗೊಳ್ಳಲಿದ್ದಾರೆ.

ಜನವರಿ, 11 ರಿಂದ 13 ರವರೆಗೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8.30 ರವರೆಗೆ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಜನವರಿ, 12 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಗಾಂಧಿ ಮೈದಾನದಲ್ಲಿ ಶ್ವಾನ ಪ್ರದರ್ಶನ ನಡೆಯಲಿದೆ. ಜನವರಿ, 13 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಓಪನ್ ಸ್ಟ್ರೀಟ್ ಫೆಸ್ಟಿವಲ್ ನಡೆಯಲಿದೆ.

ಕೊಡಗು ಪ್ರವಾಸಿ ಉತ್ಸವ ಪ್ರಯುಕ್ತ 40 ವಸ್ತು ಪ್ರದರ್ಶನ ಮಳಿಗೆಗಳು ನಿರ್ಮಾಣವಾಗಲಿದೆ. ಆಹಾರ ಮೇಳ ಇರಲಿದೆ. ಹಾಗೆಯೇ ಸರ್ಕಾರದ ಕಾರ್ಯಕ್ರಮಗಳ ಮಾಹಿತಿ ಒಳಗೊಂಡ ಮಾಹಿತಿ ಮಳಿಗೆ ನಿರ್ಮಿಸಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ತೋಟಗಾರಿಕೆ ಇಲಾಖೆಗಳ ವಸ್ತು ಪ್ರದರ್ಶನ ಮಳಿಗೆ ನಿರ್ಮಾಣವಾಗಲಿದೆ ಎಂದು ಅವರು ತಿಳಿಸಿದರು.

ಹಾಗೆಯೇ ಕೊಡಗು ಜಿಲ್ಲಾ ದರ್ಶನ ಕಾರ್ಯಕ್ರಮ ಅಂಗವಾಗಿ ಮೂರು ಮಾರ್ಗದಲ್ಲಿ ವಿವಿಧ ಪ್ರವಾಸಿ ಸ್ಥಳಗಳಿಗೆ ಬಸ್ ಸಂಚರಿಸಲಿದೆ. ಭಾಗಮಂಡಲ-ತಲಕಾವೇರಿ-ಚೇಲಾವರ ಜಲಪಾತ ಒಂದು ಮಾರ್ಗ, ದುಬಾರೆ-ನಿಸರ್ಗಧಾಮ ಮತ್ತೊಂದು ಮಾರ್ಗ ಮತ್ತು ಅಬ್ಬಿ ಜಲಪಾತ, ಮಾಂದಲ್ ಪಟ್ಟಿ ಮತ್ತು ರಾಜಾಸೀಟು ಮತ್ತೊಂದು ಮಾರ್ಗದಲ್ಲಿ ಬಸ್ ಸಂಚರಿಸಲಿದ್ದು, ಬೆಳಗ್ಗೆ 8.30 ಗಂಟೆಗೆ ಬಸ್ ಹೊರಡಲಿದೆ. 430 ರೂ. ದರ ನಿಗದಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಕೊಡಗಿನ ಇತಿಹಾಸ ಮತ್ತು ಸಂಸೃತಿ ಸಾರುವ ನಿಟ್ಟಿನಲ್ಲಿ ಪ್ರವಾಸಿ ಉತ್ಸವ ಜರುಗಲಿದೆ. ಕೊಡಗಿನ ಸಂಸ್ಕøತಿಯನ್ನು ಬಿಂಭಿಸುವಲ್ಲಿ ಕೊಡಗು ಉತ್ಸವ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕೊಡಗು ಜಿಲ್ಲೆಯಲ್ಲಿ ಪ್ರತಿ ವರ್ಷವು ಪ್ರಖ್ಯಾತ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯುತ್ತಿದ್ದು, ಈ ಬಾರಿಯ ಫಲಪುಷ್ಪ ಪ್ರದರ್ಶನದ ಜೊತೆಗೆ ಕೊಡಗು ಪ್ರವಾಸಿ ಉತ್ಸವವನ್ನು ಆಯೋಜಿಸಲಾಗಿದ್ದು, ಕೊಡಗು ಜಿಲ್ಲಾಡಳಿತ, ಪ್ರವಾಸೋ ದ್ಯಮ ಇಲಾಖೆ, ತೋಟಗಾರಿಕೆ ಇಲಾಖೆ, ಪಶು ಸಂಗೋಪನಾ ಇಲಾಖೆ, ಪ್ರವಾಸೋದ್ಯಮ ಕ್ಷೇತ್ರದ ಭಾಗಿದಾರರಾದ ಕೊಡಗು ಜಿಲ್ಲಾ ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್, ಕೊಡಗು ಜಿಲ್ಲಾ ಟ್ರಾವೆಲ್ಸ್ ಅಸೋಸಿಯೇಷನ್, ಜಿಲ್ಲಾ ಹೋಂಸ್ಟೇ ಅಸೋಸಿ ಯೇಷನ್ ಮತ್ತು ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ ಅವರ ಸಹಯೋಗದಲ್ಲಿ ವಿವಿಧ ಕಲಾವಿದರಿಂದ ಸಾಂಸ್ಕøತಿಕ ಕಾರ್ಯ ಕ್ರಮ, ಆಹಾರ ಮೇಳ, ಓಪನ್ ಸ್ಟ್ರೀಟ್ ಫೆಸ್ಟಿವಲ್, ಪ್ರಖ್ಯಾತ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮಗಳು, ಛಾಯಾ ಚಿತ್ರ ಪ್ರದರ್ಶನ, ಶ್ವಾನ ಪ್ರದರ್ಶನ ಕಾರ್ಯಕ್ರಮಗಳು ನಡೆಯಲಿದೆ.

3 ದಿನಗಳ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರು ಮತ್ತು ರಾಜ್ಯದ ಪ್ರಖ್ಯಾತ ಕಲಾವಿದರು ಪ್ರದರ್ಶನ ನೀಡಲಿದ್ದಾರೆ. ವಾಹನ ನಿಲುಗಡೆ ವ್ಯವಸ್ಥೆ ಮತ್ತಿತರ ಸಂಬಂಧ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಹೇಳಿ ದರು. ಜಿ.ಪಂ. ಸಿಇಓ ಕೆ.ಲಕ್ಷ್ಮಿಪ್ರಿಯ ಇತರರು ಇದ್ದರು.

Translate »