ಕೆ.ಆರ್.ಆಸ್ಪತ್ರೆಯಲ್ಲಿ ಮೂವರು  ಮಹಿಳಾ ಪೌರಕಾರ್ಮಿಕರಿಗೆ ಸನ್ಮಾನ
ಮೈಸೂರು

ಕೆ.ಆರ್.ಆಸ್ಪತ್ರೆಯಲ್ಲಿ ಮೂವರು  ಮಹಿಳಾ ಪೌರಕಾರ್ಮಿಕರಿಗೆ ಸನ್ಮಾನ

October 3, 2018

ಮೈಸೂರು: ಮಹಾತ್ಮ ಗಾಂಧೀಜಿ ಜನ್ಮದಿನದ ಅಂಗವಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಮೂವರು ಮಹಿಳಾ ಪೌರಕಾರ್ಮಿಕರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಕೆ.ಆರ್.ಚಲುವಾಂಬ, ಪಿಕೆಟಿಬಿ ಆಸ್ಪತ್ರೆ, ಲಯನ್ಸ್ ಸಂಸ್ಥೆಗಳ ವಿವಿಧ ಘಟಕಗಳು ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಯುಕ್ತಾಶ್ರಯದಲ್ಲಿ ಕೆ.ಆರ್.ಆಸ್ಪತ್ರೆಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಇದೇ ವೇಳೆ ಆಸ್ಪತ್ರೆಯಲ್ಲಿ ಅನಾಥ ರೋಗಿಗಳನ್ನು ಆರೈಕೆ ಮಾಡುತ್ತಾ ಬಂದಿರುವ ಪೌರಕಾರ್ಮಿಕರಾದ ಪುಟ್ಟಮ್ಮ, ರತ್ನಮ್ಮ ಹಾಗೂ ಮಂಗಳಮ್ಮ ಅವರನ್ನು ಅಭಿನಂದಿಸಲಾಯಿತು.

ಆಸ್ಪತ್ರೆ ಆವರಣ ಸ್ವಚ್ಛಗೊಳಿಸಿದ ವಿವಿಧ ಸಂಘಟನೆಗಳು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಕಚೇರಿ ರೀಜನಲ್ ಮ್ಯಾನೇಜರ್ ಮಹದೇವಕುಮಾರ್ ಅವರ ನೇತೃತ್ವದಲ್ಲಿ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು.
ಎಂಎಂಸಿಆರ್‍ಐ ಡೀನ್ ಅಂಡ್ ಡೈರಕ್ಟರ್ ಡಾ.ಸಿ.ಪಿ.ನಂಜರಾಜ್, ಕೆ.ಆರ್.ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಎಂ.ಶ್ರೀನಿವಾಸ, ಸ್ಥಾನಿಕ ವೈದ್ಯಾಧಿಕಾರಿ ಡಾ.ರಾಜೇಶ್‍ಕುಮಾರ್, ಸೆಕ್ಯೂರಿಟಿ ಸೂಪರ್‍ವೈಸರ್ ಮಹದೇವು ಸೇರಿದಂತೆ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಎಸ್‍ಬಿಐ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Translate »