ಯುವ ಸ್ಪಂದನ ಮೂಲಕ  ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ
ಮೈಸೂರು

ಯುವ ಸ್ಪಂದನ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ

October 12, 2021

ಮೈಸೂರು, ಅ.11- ಯುವ ಸ್ಪಂದನ ಕಾರ್ಯಕ್ರಮದ ಮೂಲಕ ಜಿಲ್ಲೆಯ ವಿದ್ಯಾರ್ಥಿನಿಲಯಗಳಲ್ಲಿನ ವಿದ್ಯಾರ್ಥಿ ಗಳಿಗೆ ಅರಿವು ಕಾರ್ಯಕ್ರಮ ಮೂಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರ ಜಿಲ್ಲಾಧಿಕಾರಿಗಳ ಸಭಾಂ ಗಣದಲ್ಲಿ ನಡೆದ ಯುವ ಸ್ಪಂದನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತ ನಾಡಿ, ಜಿಲ್ಲೆಯಲ್ಲಿರುವ ಪಿಯು, ಡಿಗ್ರಿ, ಅಲ್ಪ ಸಂಖ್ಯಾತರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವ ಹಿಸುತ್ತಿರುವ ವಿದ್ಯಾರ್ಥಿನಿಲಯಗಳ ಪ್ರತಿ ವಿದ್ಯಾರ್ಥಿಗಳ ಕುರಿತು ಅರಿವು ಕಾರ್ಯ ಕ್ರಮ ನಡೆಸಬೇಕು ಎಂದು ಹೇಳಿದರು.

ಯುವ ಸ್ಪಂದನ ಕಾರ್ಯಕ್ರಮಗಳ ಬಗ್ಗೆಯೂ ಹೆಚ್ಚಿನ ಪ್ರಚಾರ ಸಿಗುವಂತೆ ಮಾಡಿ. ಇದರಿಂದಾಗುವ ಉಪಯೋಗ ಗಳ ಬಗ್ಗೆ ಜನರಿಗೆ ತಿಳಿಯುವಂತಾಗಲಿ. ಅರಿವು ಕಾರ್ಯಕ್ರಮಗಳಲ್ಲಿ ವೈದ್ಯಕೀಯ ಸೇವೆ ಮತ್ತು ಸಾಮಾಜಿಕ ಸೇವೆಗಳಲ್ಲಿ ತೊಡಗಿರುವವರನ್ನು ಬಳಸಿಕೊಂಡರೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದರು.

ಮುಂದಿನ ದಿನಗಳಲ್ಲಿ ಯುವ ಸ್ಪಂದನ ಕಾರ್ಯಕ್ರಮದ ಮೂಲಕ ಒಳ್ಳೆಯ ಕಾರ್ಯಕ್ರಮಗಳು ಮೂಡಿಬಂದು ಹೆಚ್ಚು ಜನರನ್ನು ತಲುಪುವಂತಾಗಬೇಕು ಎಂದರು.

ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ.ಸುರೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀನಿವಾಸಮೂರ್ತಿ, ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯಾ ಧಿಕಾರಿ ಸಿದ್ದರಾಮಪ್ಪ, ಜಿಲ್ಲಾ ದೈಹಿಕ ಶಿಕ್ಷ ಣಾಧಿಕಾರಿ ಎಸ್.ಸಿದ್ದರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧ್ಯಕ್ಷೆ ಶಾರದ ಸೇರಿದಂತೆ ಇತರರು ಹಾಜರಿದ್ದರು.

Translate »