ಬೆಂಗಳೂರು, ಜೂ.೫- ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಸಂಬAಧ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ವಾಗ್ಯುದ್ಧ ಮುಂದು ವರೆದಿದೆ. ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯ ಪರಿ ಷ್ಕರಣೆ ಮಾಡಲಾಗಿದೆ ಎಂಬ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ನಾಗೇಶ್ ಅವರಿಗೆ ಟ್ವೀಟ್ ಮಾಡುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯ ಪರಿಷ್ಕರಣೆ ಮಾಡ ಲಾಗಿದೆ ಎಂದು ಸಚಿವ ಬಿ.ಸಿ.ನಾಗೇಶ್ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೂಗಳು ಯಾರು? ಎನ್ನು ವುದನ್ನು ಸಚಿವರು ಬಹಿರಂಗಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪರಿಷ್ಕöÈತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣ ಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣ ಸಲಾಗಿದೆ. ಇವರನ್ನು ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ ಎಂದು ಪ್ರತಿಭಟಿ ಸುತ್ತಿರುವವರು ಅನ್ಯಧರ್ಮಿಯರಲ್ಲ, ಹಿಂದೂಗಳೇ ಅಲ್ವಾ? ಎಂದು ಪ್ರಶ್ನಿಸಿದ್ದಾರೆ.
ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ ದಲಿತ ಹಾಗೂ ಹಿಂದುಳಿದ ಜಾತಿಗಳ ವಿದ್ವಾಂಸ ರಿಗೆ ಪ್ರಾತಿನಿಧ್ಯವೇ ನೀಡಿಲ್ಲವಲ್ಲಾ? ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ? ಬಸವಣ್ಣ,ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತೇ? ಅವಮಾನ ಮಾಡಲಾಯಿತೇ? ನಾರಾಯಣ ಗುರು, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿ ತೋರಿಸಿದ್ದಕ್ಕಾಗಿ ನಿರ್ಲಕ್ಷ÷್ಯ ಮಾಡಲಾಯಿತೇ? ಹಾಗೆಂದು ಹೇಳಿಬಿಡಿ ಎಂದಿದ್ದಾರೆ. ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕöÈತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ, ಮೊದಲು ಈ ಪರಿಷ್ಕöÈತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.