ಕೊಡಗಿನಲ್ಲಿ ಹುಲಿ ಹಾವಳಿ: 3 ತಿಂಗಳಲ್ಲಿ 45 ಜಾನುವಾರು ಬಲಿ
ಕೊಡಗು

ಕೊಡಗಿನಲ್ಲಿ ಹುಲಿ ಹಾವಳಿ: 3 ತಿಂಗಳಲ್ಲಿ 45 ಜಾನುವಾರು ಬಲಿ

December 24, 2019

ಮಡಿಕೇರಿ, ಡಿ.23- ವರ್ಷದ ಎಲ್ಲಾ ದಿನಗಳಲ್ಲೂ ಕಾಡಾನೆ ಹಾವಳಿಯಿಂದ ಕಂಗೆಡುತ್ತಿದ್ದ ಕೊಡಗು ಜಿಲ್ಲೆಯ ಜನÀರು ಇದೀಗ ಹುಲಿಯ ಹಾವಳಿ ಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.

ವಿರಾಜಪೇಟೆ ತಾಲೂಕಿನ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಕಳೆದ ಮೂರು ತಿಂಗಳಲ್ಲಿ ಹುಲಿ ದಾಳಿಗೆ 45 ಜಾನುವಾರುಗಳು ಬಲಿ ಯಾಗಿವೆ. ಇದು ಜನರನ್ನು ಆತಂಕಕ್ಕೆ ಉಂಟುಮಾಡಿದ್ದು, ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಬೋನ್ ಇಟ್ಟು ಕಾಯುತ್ತಿದೆ. ಕಳೆದ ಒಂದೇ ತಿಂಗಳಲ್ಲಿ 12ಕ್ಕೂ ಹೆಚ್ಚು ಜಾನುವಾರುಗಳನ್ನು ಹುಲಿ ಕೊಂದು ತಿಂದಿದೆ.

ವಿರಾಜಪೇಟೆ ತಾಲೂಕಿನ ಬಾಳೆಲೆ, ನಿಟ್ಟೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜಾನುವಾರುಗಳನ್ನು ಟಾರ್ಗೆಟ್ ಮಾಡಿ ಹುಲಿ ದಾಳಿ ನಡೆಸಿ ತಿಂದು ಹಾಕುತ್ತಿದೆ. ಈ ವ್ಯಾಪ್ತಿಯಲ್ಲಿ ಕೇವಲ ಒಂದೇ ಹುಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದೆ ಎಂದು ಅಂದಾಜಿಸಲಾಗಿದೆ. ಅರಣ್ಯ ಇಲಾಖೆ ಹುಲಿ ಸೆರೆಗಾಗಿ ಬೋನ್ ಇಟ್ಟಿದೆ. ಆದರೆ ಹುಲಿ ಬೋನ್ ಕಡೆ ಸುಳಿಯುತ್ತಲೇ ಇಲ್ಲ.

ಜನರು ಹುಲಿಯ ಆತಂಕದಿಂದ ರಾತ್ರಿ ಇಡೀ ಟಾರ್ಚ್ ಹಾಕಿ ಮನೆ ಸುತ್ತಾ ಜಾರುವಾರುಗಳಿಗೆ ರಕ್ಷಣೆ ನೀಡುತ್ತಿದ್ದಾರೆ. ಹುಲಿ ದಾಳಿಯಿಂದಾಗಿ ಜಾರುವಾರುಗಳು ಸಾವನ್ನಪ್ಪಿದರೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಕೇವಲ 2-3 ಸಾವಿರ ರೂ. ಪರಿಹಾರ ನೀಡುತ್ತಾರೆ. ಆದರೆ ಒಂದು ಜರ್ಸಿ ತಳಿಯ ಹಸುಗೆ ಕನಿಷ್ಠ 40 ರಿಂದ 50 ಸಾವಿರ ರೂ ಬೆಲೆ ಇದೆ. ಹೀಗಾಗಿ ಜಾನುವಾರುಗಳನ್ನು ಸಾಕಿಕೊಂಡು ಬದುಕು ದೂಡುತ್ತಿರುವ ಬಡ ರೈತರು ಹುಲಿ ದಾಳಿಯಿಂದ ಕಂಗಾಲಾಗಿದ್ದಾರೆ.

Translate »