ರಾಮಸಮುದ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಚಾಮರಾಜನಗರ

ರಾಮಸಮುದ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

September 18, 2018

ಚಾಮರಾಜನಗರ:  ರಾಜಕೀಯ ದ್ವೇಷದಿಂದ ಕಾಂಗ್ರೆಸ್ ಹಾಗೂ ಬಿಎಸ್‍ಪಿ ಕಾರ್ಯಕರ್ತರ ನಡುವೆ ನಡೆದಿದ್ದ ಘರ್ಷಣೆಯ ಹಿನ್ನೆಲೆಯಲ್ಲಿ ಸೋಮವಾರ ರಾಮಸಮುದ್ರದ ಬಡಾವಣೆಯಲ್ಲಿ ಬಿಗಿಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಬಡಾವಣೆಯ ಮುಖ್ಯ ದ್ವಾರದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಕೆಎಸ್‍ಆರ್‍ಪಿ)ಯನ್ನು ನಿಯೋಜಿಸಲಾಗಿದೆ.

ಬಡಾವಣೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಇದೆ. ಹಾಗಾಗಿ, ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕಲ್ಲು ತೂರಾಟ ಹಾಗೂ ಘರ್ಷಣೆಯಿಂದ ಗಾಯಗೊಂಡಿರುವ ಕಾಂಗ್ರೆಸ್‍ನ ಐವರು ಹಾಘೂ ಬಿಎಸ್‍ಪಿಯ ಮೂವರು ಕಾರ್ಯಕರ್ತರಿಗೆ ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

Translate »