ಬೈಕ್‍ಗೆ ಟಿಪ್ಪರ್ ಡಿಕ್ಕಿ: ಸವಾರ ಸಾವು
ಮೈಸೂರು

ಬೈಕ್‍ಗೆ ಟಿಪ್ಪರ್ ಡಿಕ್ಕಿ: ಸವಾರ ಸಾವು

July 23, 2018

ಮೈಸೂರು: ಬೈಕ್‍ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಿಂಗ್ ರಸ್ತೆಯ ರಾಯಲ್ ಇನ್ ಹೋಟೆಲ್ ಸಿಗ್ನಲ್ ಬಳಿ ಶನಿವಾರ ನಡೆದಿದೆ.

ಜಯರಾಮು ಮೃತಪಟ್ಟವರು. ಇವರು ಬೈಕ್ (ಕೆಎ09ವಿ1437)ನಲ್ಲಿ ಶನಿವಾರ ಬೆಳಿಗ್ಗೆ ರಿಂಗ್ ರಸ್ತೆಯ ರಾಯಲ್ ಇನ್ ಹೋಟೇಲ್ ಸಿಗ್ನಲ್ ಲೈಟ್ ಜಂಕ್ಷನ್ ಬಳಿ ಹೋಗುತ್ತಿದ್ದಾಗ ಸಿಗ್ನಲ್ ಇದ್ದರೂ ಬಲಭಾಗದಿಂದ ವೇಗವಾಗಿ ಬಂದ ಟಿಪ್ಪರ್ (ಕೆಎ11 ಬಿ5376) ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಜಯರಾಮ ಅವರ ತಲೆಯ ಮೇಲೆ ಲಾರಿಯ ಚಕ್ರ ಹರಿದಿದೆ. ಇದರಿಂದ ತಲೆಗೆ ತೀವ್ರ ಪೆಟ್ಟಾಗಿದ್ದ ಜಯರಾಮನನ್ನು ಸಾರ್ವಜನಿಕರು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಕರೆದೊಯ್ದರಾದರೂ ವೈದ್ಯರು ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಜಯರಾಮು ಅವರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಈ ಸಂಬಂಧ ವಿವಿಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »