ಮೈಸೂರು: ಮರಳು ತುಂಬಿದ ಟಿಪ್ಪರ್ ಲಾರಿಯೊಂದು ವಿದ್ಯುತ್ ಕಬ್ಬಕ್ಕೆ ಡಿಕ್ಕಿ ಹೊಡೆದ್ದು, ಕಂಬಗಳು ಧರೆಗುರು ಳಿವೆ. ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾ ರಿಗೆ ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ರುವ ಪಂಚಮುಖಿ ಗಣಪತಿ ದೇವಸ್ಥಾನದ ಸಮೀಪದ ಅಕ್ಬರ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೂಡಲೇ ಚೆಸ್ಕಾಂ ಅಧಿಕಾರಿಗಳು ಹಾಗೂ ನಗರ ಪಾಲಿಕೆ ಸದಸ್ಯ ರಮೇಶ್ ಸ್ಥಳಕ್ಕೆ ಆಗಮಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.