ಕೊಡಗಿನಲ್ಲಿ ಟಿಪ್ಪು ಜಯಂತಿ ವೇಳೆ ದಾಖಲಾಗಿದ್ದ 18 ಕೇಸ್ ಹಿಂದಕ್ಕೆ
ಮೈಸೂರು

ಕೊಡಗಿನಲ್ಲಿ ಟಿಪ್ಪು ಜಯಂತಿ ವೇಳೆ ದಾಖಲಾಗಿದ್ದ 18 ಕೇಸ್ ಹಿಂದಕ್ಕೆ

March 9, 2020

ಮಡಿಕೇರಿ,ಮಾ.8(ಪ್ರಸಾದ್)- ಟಿಪ್ಪು ಜಯಂತಿ ವಿರೋಧಿಸಿ ನಡೆದಂತಹ ಪ್ರತಿಭಟನೆಗಳು ಸೇರಿ ದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ವಿವಿಧ ಒಟ್ಟು 46 ಪ್ರಕರಣಗಳನ್ನು ರಾಜ್ಯ ಸರಕಾರ ಹಿಂಪಡೆಯಲು ಅನುಮತಿ ನೀಡಿದೆ.

ಈ 46 ಕೇಸುಗಳ ಪೈಕಿ 18 ಪ್ರಕರಣಗಳು ಕೊಡಗು ಜಿಲ್ಲೆಗೇ ಸಂಬಂಧಿಸಿವೆ. ಈ ಪೈಕಿ ಅತೀ ಹೆಚ್ಚು ಪ್ರಕರಣ ಗಳು ಟಿಪ್ಪು ಜಯಂತಿಯ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಕೇಸು ಗಳಾಗಿದ್ದು, ಇದೀಗ ಬಿಜೆಪಿ ಸರಕಾರ ಎರಡೂ ಕೋಮುಗಳ ಕೇಸುಗಳನ್ನು ಹಿಂಪಡೆಯುತ್ತಿದೆ.

ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾದ ಸಂದರ್ಭ ವಿಧಾನಸಭಾ ಮಾಜಿ ಸ್ಪೀಕರ್ ಹಾಗೂ ಹಾಲಿ ವಿರಾಜ ಪೇಟೆ ಶಾಸಕ ಕೆ.ಜಿ.ಬೋಪಯ್ಯ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಟಿಪ್ಪು ಜಯಂತಿಯ ಸಂದರ್ಭದ ಗಲಭೆಯಲ್ಲಿ ಅಮಾಯಕರ ವಿರುದ್ಧ ಪ್ರಕರಣ ದಾಖಲಿಸಲಾ ಗಿದ್ದು, ಅವುಗಳನ್ನು ಹಿಂಪಡೆಯುವಂತೆ ಮನವಿ ಮಾಡಿದ್ದರು. ಮುಂದಿನ ದಿನಗಳಲ್ಲಿ ಈ ಬಗ್ಗೆ ಸಮಗ್ರ ವಾಗಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವು ದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು. ಅದರಂತೆ ಇದೀಗ ಸುತ್ತೋಲೆ ಹೊರಡಿಸಲಾಗಿದೆ. ವಿವಿಧ ಕೇಸುಗಳಲ್ಲಿ ಕೋರ್ಟ್‍ಗೆ ಅಲೆಯುತ್ತಿದ್ದವರು ಇದೀಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಟಿಪ್ಪು ಜಯಂತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳಗಾವಿ, ಮಂಡ್ಯ, ಚಿತ್ರದುರ್ಗ, ಬಸವನ ಬಾಗೇವಾಡಿ ಠಾಣೆಗಳಲ್ಲಿದ್ದ ನಾನಾ ಪ್ರಕ ರಣಗಳು, ಉತ್ತರ ಕನ್ನಡ ಜಿಲ್ಲೆಯಲ್ಲಿ ಹಿಂದೂ ಪರ ಸಂಘಟಕ ಪರೇಶ್ ಮೇಸ್ತ್ ಸಾವಿನ ವಿರುದ್ಧದ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಹಲ್ಲೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ಸೇರಿ ದಂತೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ, ಹಾಸನ, ಬೆಳಗಾವಿ, ಚಾಮರಾಜನಗರ, ಹಾವೇರಿ ಜಿಲ್ಲೆಯ ವಿವಿಧ ಠಾಣೆಗಳು ಸೇರಿದಂತೆ 46 ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡಲಾಗಿದೆ.

ಪ್ರಕರಣಗಳ ಮಾಹಿತಿ: 2014ರಲ್ಲಿ ಕಸ್ತೂರಿ ರಂಗನ್ ಅವರ ಸೂಕ್ಷ್ಮ ಪರಿಸರ ವಲಯ ಸಂಬಂಧಿತ ವರದಿ ಜಾರಿಗೊಳಿಸುವ ಬಗ್ಗೆ ನವೆಂಬರ್ 28ರಂದು ಮಡಿಕೇರಿ ನಗರದ ಕೋಟೆ ಹಳೇ ವಿಧಾನ ಸಭಾಂ ಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ಸಮಿತಿಯ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಜಿಲ್ಲೆಯ ಉನ್ನತ ಅರಣ್ಯ ಅಧಿಕಾರಿ ಗಳು ಭಾಗವಹಿಸಿದ್ದರು. ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದ್ದ ಸಂದರ್ಭ ಅರಣ್ಯ ಅಧಿಕಾರಿಯೊ ಬ್ಬರು ನಗುತ್ತಿದ್ದುದನ್ನು ಪ್ರಶ್ನಿಸಿ ಅವರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿದರೆಂಬ ಕಾರಣಕ್ಕೆ ಕೆಲವರ ಮೇಲೆ ಮಡಿಕೇರಿ ನಗರ ಪೊಲೀ ಸರು ಮೊಕದ್ದಮೆ ದಾಖಲಿಸಿದ್ದರು.

ಈ ಹಿಂದಿನ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೊದಲ ಬಾರಿಗೆ ರಾಜ್ಯದಲ್ಲಿ ಸರ್ಕಾ ರದ ವತಿಯಿಂದಲೇ ಟಿಪ್ಪು ಸುಲ್ತಾನ್ ಜಯಂತಿ ಆಯೋಜಿಸಬೇಕೆಂದು ಸುತ್ತೋಲೆ ಹೊರಡಿಸಿದ್ದರು. ಇದಕ್ಕೆ ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ಮತ್ತು ಪ್ರತಿಭಟನೆಗಳು ವ್ಯಕ್ತವಾ ಗಿದ್ದವು. ತದನಂತರ 2015ರ ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆ ಸಂದರ್ಭ ವಿವಿಧ ಹಿಂದೂ ಪರ ಸಂಘಟನೆಗಳು ಮತ್ತು ಬಿಜೆಪಿ ಕಾರ್ಯಕರ್ತರು ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಟಿಪ್ಪು ಜಯಂತಿ ವಿರೋಧಿಸುವ ಸಲುವಾಗಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿತ್ತು. ಈ ಸಂಬಂಧವೂ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಹಲವರ ವಿರುದ್ದ ಪ್ರಕರಣ ದಾಖಲಾಗಿತ್ತು. ಅದೇ ದಿನದಂದು ಕೊಡಗು ಜಿಲ್ಲಾ ಬಂದ್‍ಗೆ ಕರೆ ನೀಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ವಾಹನವೊಂದಕ್ಕೆ ಬೆಂಕಿ ಹಚ್ಚಿದ್ದಲ್ಲದೆ ವ್ಯಕ್ತಿಯೊಬ್ಬರಿಗೆ ಸೇರಿದ ಕಾರಿನ ಮೇಲೆ ಕಲ್ಲು ತೂರಿ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಸಂಬಂಧ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2015ರ ನವೆಂಬರ್ 9ರಂದು ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗುಹ್ಯ ಅಗಸ್ತೇಶ್ವರ ಕಟ್ಟಡ, ನವೆಂಬರ್ 10ರಂದು ಪಾಲಿಬೆಟ್ಟದ ಖಾಸಗಿ ಬಸ್ ನಿಲ್ದಾಣ, ಕೊಂಡಂಗೇರಿಯ ಗ್ರಾಮದ ಹಾಲುಗುಂದ ಜಂಕ್ಷನ್ ಬಳಿ ಟಿಪ್ಪು ಸುಲ್ತಾನ್ ಜಯಂತಿಗೆ ಶುಭ ಕೋರಿ ಫ್ಲೆಕ್ಸ್ ಅಳವಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಹಲವರ ವಿರುದ್ದವೂ ಪ್ರಕರಣ ದಾಖಲಿಸಲಾಗಿತ್ತು.

2015ರ ನವೆಂಬರ್ 10ರಂದು ಸೋಮವಾರಪೇಟೆಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿತ ಟಿಪ್ಪು ಜಯಂತಿ ಕಾರ್ಯಕ್ರಮ ವೇಳೆ ಕೆಲವರು ನುಗ್ಗಿ ದಾಂಧಲೆ ನಡೆಸಿದ ಸಂದರ್ಭ ಕೆಲವರು ಗಾಯ ಗೊಂಡಿದ್ದರು. ಗಾಯಾಳುಗಳು ನೀಡಿದ ದೂರಿನಂತೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಕೆಲವು ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಾಗಿತ್ತು. ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಬಂದವರು ಮತ್ತು ಅದನ್ನು ವಿರೋಧಿಸಿದ ಗುಂಪುಗಳ ನಡುವೆ ಘರ್ಷಣೆಯಾಗಿತ್ತು. ಜಯಂತಿ ಆಚರಣೆಗೆ ಬಂದವರನ್ನು ಪೊಲೀಸ್ ಭದ್ರತೆಯಲ್ಲಿ ಕರೆದೊಯ್ಯುವ ಸಂದರ್ಭ ಒಂದು ಗುಂಪು ಬಸ್ಸನ್ನು ತಡೆದು ಅದರ ಗಾಜುಗಳಿಗೆ ಕಲ್ಲು ತೂರಿ ಹಾನಿ ಮಾಡಿದ ಕುರಿತು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2015ರ ನವೆಂಬರ್ 13ರಂದು ಸೋಮವಾರಪೇಟೆಯ ವರ್ಕ್‍ಶಾಪ್ ಒಂದಕ್ಕೆ ಬೆಂಕಿ ಹಚ್ಚಿದ್ದು, ದ್ವಿಚಕ್ರ ವಾಹನ ಸುಟ್ಟು ಹೋಗಿತ್ತು. ಈ ಬಗ್ಗೆಯೂ ಸೋಮವಾರಪೇಟೆ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿದ್ದರು.

2015ರ ನವೆಂಬರ್ 10ರಂದು ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವರನ್ನು ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಕರೆದೊಯ್ಯುವ ಸಂದರ್ಭ ವಾಹನದ ವೈಯರಿಂಗ್ ಹಾಗೂ ಮೇಲ್ಛಾವಣಿಯ ಹೊದಿಕೆ ಹರಿದಿರುವುದು, ಕಾಲೂರು ಬಳಿ ಕೆಎಸ್‍ಆರ್‍ಟಿಸಿ ಬಸ್‍ಗೆ ಕಲ್ಲು ತೂರಿ ಗಾಜು ಒಡೆದ ಪ್ರಕರಣಕ್ಕೆ ಸಂಬಂಧಿಸಿ ದಂತೆಯೂ ಮಡಿಕೇರಿ ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಫೇಸ್‍ಬುಕ್‍ನಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಅವಹೇಳನಕಾರಿ ಪೋಸ್ಟರ್ ಹಾಕಿದ್ದು, 2018ರಲ್ಲಿ ಚುನಾವಣಾ ಪ್ರಚಾರ ಸಂದರ್ಭ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿದ್ದು, ಗೋಣಿಕೊಪ್ಪ ಪೊಲೀಸರು ದಸ್ತಗಿರಿಗೆ ಮುಂದಾದಾಗ ಪೊಲೀಸ ಭದ್ರತೆಯಿಂದ ತಪ್ಪಿಸಿಕೊಂಡು, ದಸ್ತಗಿರಿಗೆ ಪ್ರತಿರೋಧ ಒಡ್ಡಿದ ಪ್ರಕರಣಗಳು ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ವಿವಿಧ ಒಟ್ಟು 18 ಕೇಸುಗಳು ದಾಖಲಾಗಿದ್ದವು. ಈಗ ಈ ಎಲ್ಲಾ ಪ್ರಕರಣ ಗಳ ಹಿಂಪಡೆಯಲು ಸರ್ಕಾರ ತೀರ್ಮಾನಿಸಿ, ಅನುಮತಿಯನ್ನು ನೀಡಿದೆ.

Translate »