ನ.10ರಂದು ಟಿಪ್ಪು ಜಯಂತಿ ಆಚರಣೆ: ಸರ್ಕಾರ ನಿರ್ಧಾರ
ಮೈಸೂರು

ನ.10ರಂದು ಟಿಪ್ಪು ಜಯಂತಿ ಆಚರಣೆ: ಸರ್ಕಾರ ನಿರ್ಧಾರ

November 4, 2018

ಬೆಂಗಳೂರು:  ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಶನಿವಾರ ಹೇಳಿದ್ದಾರೆ. ವಿಧಾನಸೌಧದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಯ ಮಾಲಾ, ಟಿಪ್ಪು ಜಯಂತಿ ಆಚರಿಸಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಈಗಾಗಲೇ ನಿರ್ಧರಿಸಿದ್ದಾರೆ. ಟಿಪ್ಪು ಜಯಂತಿ ಆಚರಿಸುವುದು ನಮ್ಮ ಕರ್ತವ್ಯ. ಏನಾದರೂ ಅನಾ ಹುತವಾದರೆ ಅದಕ್ಕೆ ಬಿಜೆಪಿಯವರೇ ಹೊಣೆ ಎಂದರು.

Translate »