ಟಿಪ್ಪು ಜಯಂತಿ; ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು
ಕೊಡಗು

ಟಿಪ್ಪು ಜಯಂತಿ; ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು

November 8, 2018

ಮಡಿಕೇರಿ:  ಜಿಲ್ಲಾಡಳಿತ ವತಿಯಿಂದ ನವೆಂಬರ್ 10 ರಂದು ನಡೆಯುವ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಇದುವರೆಗೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಮಾಹಿತಿ ಪಡೆದರು.

ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಟಿಪ್ಪು ಜಯಂತಿ ಆಚರಣೆ ಸಂಬಂಧ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗಳು ಕೈಗೊಂಡಿರುವ ಸೂಕ್ತ ಬಂದೋ ಬಸ್ತ್ ಬಗ್ಗೆ ದಕ್ಷಿಣ ವಲಯ ಐಜಿಪಿ, ಜಿಲ್ಲಾಧಿ ಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಂದ ಮಾಹಿತಿ ಪಡೆದರು.

ಕಾನೂನು ಸುವ್ಯವಸ್ಥೆಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಯಾರ ಮನಸ್ಸಿಗೂ ನೋವು ಉಂಟಾಗಬಾರದು, ಆ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಟಿಪ್ಪು ಜಯಂತಿ ಆಚರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ನಗರಸಭಾ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಐಜಿಪಿ ಶರತ್‍ಚಂದ್ರ್ರ, ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ ಇತರರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಸರ್ಕಾರದ ವತಿಯಿಂದ ಅನೇಕ ಜಯಂತಿಗಳನ್ನು ಆಚರಣೆ ಮಾಡಲಾಗುತ್ತಿದೆ. ಅದೇ ರೀತಿ ಟಿಪ್ಪು ಜಯಂತಿಯನ್ನು ಆಚರಿಸಲಾಗುವುದು. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.

ಟಿಪ್ಪು ಜಯಂತಿಯನ್ನು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಸಂಘಟನೆಗಳು ಹಾಗೂ ಸಮಾಜಗಳು ಸಹಕರಿಸುವಂತೆ ಕೋರಿದ ಸಚಿವರು, ಯಾರ ಮನಸ್ಸಿಗೂ ನೋವಾಗದಂತೆ ಜಯಂತಿಯನ್ನು ಆಚರಿಸಲಾಗುವುದು. ಶಾಂತಿ ಕದಡುವವರ ವಿರುದ್ಧ ಜಿಲ್ಲಾಡಳಿತ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದರು.

ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಆಚ ರಣೆ ಸಂಬಂಧ ಸಾಕಷ್ಟು ವಿರೋಧವಿದೆಯಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರದ ನಿರ್ದೇಶನದಂತೆ ಜಯಂತಿ ನಡೆಯ ಲಿದೆ ಎಂದರು. ಮುಖ್ಯಮಂತ್ರಿಯವರು ಈ ಹಿಂದೆ ನೀಡಿರುವ ಹೇಳಿಕೆ ಬಗ್ಗೆ ಗಮನ ಸೆಳೆದ ಪತ್ರ ಕರ್ತರು, ಈ ಬಗ್ಗೆ ಮುಖ್ಯಮಂತ್ರಿ ಅವರ ಗಮ ನಕ್ಕೆ ತರಲಾಗುವುದು ಎಂದು ಪ್ರತಿಕ್ರಿಯಿಸಿದರು.

ದಕ್ಷಿಣ ವಲಯ ಐಜಿಪಿ ಶರತ್‍ಚಂದ್ರ ಮಾತ ನಾಡಿ, ಟಿಪ್ಪು ಜಯಂತಿಯನ್ನು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆಯಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈಗಾಗಲೇ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ಹಂತದಲ್ಲಿ ಶಾಂತಿ ಸಭೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಟಿಪ್ಪು ಜಯಂತಿಯನ್ನು ಶಾಂತಿ ಯುತವಾಗಿ ಆಚರಿಸುವ ನಿಟ್ಟಿನಲ್ಲಿ 1500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗುವುದು. ಜೊತೆಗೆ ಪೊಲೀಸ್ ರ್ಯಾಪಿಡ್ ರೆಸ್ಪಾನ್ಸ್ ತಂಡವನ್ನು ನಿಯೋಜಿಸಲಾಗುವುದು.

ಚೆಕ್‍ಪೋಸ್ಟ್‍ಗಳಲ್ಲಿ ಹೆಚ್ಚಿನ ನಿಗಾವಹಿಸಲಾಗುವುದು. ಕಾನೂನಿಗೆ ಭಂಗ ತರು ವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶರತ್ ಚಂದ್ರ ತಿಳಿಸಿದರು.

Translate »