ಗಂಡನ ಕಿರುಕುಳಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿ ಗೃಹಿಣಿ ಆತ್ಮಹತ್ಯೆ
ಹಾಸನ

ಗಂಡನ ಕಿರುಕುಳಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿ ಗೃಹಿಣಿ ಆತ್ಮಹತ್ಯೆ

November 8, 2018

ಚನ್ನರಾಯಪಟ್ಟಣ: ಗಂಡನ ಕಿರುಕುಳ ತಾಳಲಾರದೆ ಗೃಹಿಣಿಯೋರ್ವರು ತನ್ನ ಇಬ್ಬರು ಮಕ್ಕಳೊಂದಿಗೆ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರ ನಡೆದಿದೆ.

ಚನ್ನರಾಯಪಟ್ಟಣ ತಾಲೂಕಿನ ದಿಂಡಗನೂರು ಗ್ರಾಮದ ರಮೇಶ್ ಎಂಬವರ ಪತ್ನಿ ರಾಧಾ(31) ಅವರೇ ತಮ್ಮ ಮಕ್ಕಳಾದ ಭರತ್(4) ಮತ್ತು ಕಾಂತರಾಜು(6) ಎಂಬವರೊಂದಿಗೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿ ಯುತ್ತಿದ್ದಂತೆ ಚನ್ನರಾಯಪಟ್ಟಣ ಪಟ್ಟಣ ಠಾಣೆ ಪೊಲೀಸರು ಅಗ್ನಿ ಶಾಮಕ ದಳದ ಸಿಬ್ಬಂದಿ ಸಹಕಾರದೊಂದಿಗೆ ಶೋಧ ಕಾರ್ಯ ಕೈಗೊಂಡಿದ್ದು, ರಾಧಾ ಅವರ ಮೃತದೇಹ ಪತ್ತೆಯಾಗಿದ್ದು, ಇಬ್ಬರು ಮಕ್ಕಳ ಮೃತದೇಹಗಳಿಗಾಗಿ ಶೋಧ ಮುಂದುವರೆದಿದೆ.
ಗಂಡನ ಕಿರುಕುಳದಿಂದ ರಾಧಾ ತನ್ನ ಮಕ್ಕಳೊಂದಿಗೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದ್ದು, ಆಕೆಯ ಪತಿ ರಮೇಶ್‍ನನ್ನು ಬಂಧಿಸಲಾಗಿದೆ ಎಂದು ಚನ್ನರಾಯಪಟ್ಟಣ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್‍ಸ್ಪೆಕ್ಟರ್ ಮಂಜುನಾಥಗೌಡ ಅವರು ‘ಮೈಸೂರು ಮಿತ್ರ’ನಿಗೆ ತಿಳಿಸಿದರು.

Translate »