ಕೋಲ್ಕತಾ: ಲೋಕಸಭೆ ಚುನಾವಣೆಯ ಸೋಲಿನ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾ ಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಪ್ರಸ್ತಾವನೆಯನ್ನು ಟಿಎಂಸಿ ತಿರಸ್ಕರಿ ಸಿದೆ. ಇಂದು ಟಿಎಂಸಿ ನಾಯಕರ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ, ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದೆ. ಆದರೆ, ಪಕ್ಷ ನನ್ನ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಹೀಗಾಗಿ ನಾನು ಸಿಎಂ ಸ್ಥಾನದಲ್ಲಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ತುರ್ತು ಪರಿಸ್ಥಿತಿಯಂತಹ ಪರಿಸ್ಥಿತಿಯನ್ನು ಸೃಷ್ಟಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಕೇಂದ್ರೀಯ ಭದ್ರತಾ ಪಡೆಗಳು ನಮ್ಮ ವಿರುದ್ಧ ಕೆಲಸ ಮಾಡಿವೆ. ಹಿಂದು ಮತ್ತು ಮುಸ್ಲಿಮರನ್ನು ವಿಭಜಿಸಿ ಮತಗಳನ್ನು ಒಡೆದಿದ್ದಾರೆ. ನಾವು ಚುನಾವಣಾ ಆಯೋಗಕ್ಕೆ ದೂರು ನೀಡಿ ದರೂ ಆಯೋಗ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಮಮತಾ ಬ್ಯಾನರ್ಜಿ ಆರೋಪಿದರು. ನಾನು ಕಾಂಗ್ರೆಸ್ ಪಕ್ಷದಂತಲ್ಲ, ನಾನು ಯಾವುದೇ ಕಾರಣಕ್ಕೂ ಶರಣಾಗುವುದಿಲ್ಲ. ಈ ದೇಶ ಎಲ್ಲರಿಗೂ ಸೇರಿದ್ದು, ನಾನು ಹಿಂದು ಧರ್ಮಕ್ಕೆ ಸೇರಿದವಳಾಗಿದ್ದೇನೆ. ಆದರೆ, ಮುಸ್ಲಿಮರನ್ನು ಕಡೆಗಣಿಸಲು ಸಾಧ್ಯವಿಲ್ಲ. ಈ ಚುನಾವಣೆಯಲ್ಲಿ ಗುಂಡು ಹಾರಿಸಲಾಗಿದೆ, ಹಿಂಸಾಚಾರ ನಡೆದಿದೆ. ಬಿಜೆಪಿ ಕೇಂದ್ರೀಯ ಭದ್ರತಾ ಪಡೆಗಳನ್ನು ನಿಯಂತ್ರಿಸಿದೆ. ಬಿಜೆಪಿ ದೆಹಲಿಯಲ್ಲಿ, ರಾಜಸ್ಥಾನ ಮತ್ತು ಗುಜರಾತ್‍ನಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಹೇಗೆ ಗೆಲುವು ಸಾಧಿಸಿದೆ. ನಾನು ಇದನ್ನು ನಂಬುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ಕಿಡಿಕಾರಿದರು.