ಪರಿಶಿಷ್ಟ ಫಲಾನುಭವಿಗಳಿಗೆ ವಿರಳ ಕಾಯಿಲೆಗೂ ಚಿಕಿತ್ಸಾ ವೆಚ್ಚ ಭರಿಸಲು ಸರ್ಕಾರ ನಿರ್ಧಾರ
News

ಪರಿಶಿಷ್ಟ ಫಲಾನುಭವಿಗಳಿಗೆ ವಿರಳ ಕಾಯಿಲೆಗೂ ಚಿಕಿತ್ಸಾ ವೆಚ್ಚ ಭರಿಸಲು ಸರ್ಕಾರ ನಿರ್ಧಾರ

September 9, 2022

ಬೆಂಗಳೂರು,ಸೆ.8(ಕೆಎಂಶಿ)-ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿ ಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿ ರುವ ಅವರು, ಹೆಚ್ಚು ಚಿಕಿತ್ಸಾ ವೆಚ್ಚ ತಗುಲುವ ಕಾಯಿಲೆಗಳಿಗೂ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗಿದೆ. ಈ ಮೂಲಕ ಬಡ ಜನರ ಆರೋಗ್ಯ ರಕ್ಷಣೆಗೆ ಹೊಸ ಕೊಡುಗೆಯನ್ನು ರಾಜ್ಯ ಸರ್ಕಾರ ನೀಡಿದೆ ಎಂದಿದ್ದಾರೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಯಡಿ, ವಿವಿಧ ಕಾಯಿಲೆಗಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನಿಂದ ಚಿಕಿತ್ಸಾ ವೆಚ್ಚ ಭರಿಸಲಾಗುತ್ತಿದೆ. ಆದರೆ ಕೆಲ ವಿರಳ ಕಾಯಿಲೆಗಳನ್ನು ಈ ಯೋಜನೆಯಡಿ ಸೇರಿಸಲಾಗಿಲ್ಲ. ಅಲ್ಲದೆ ಇಂತಹ ರೋಗಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಇರುವುದಿಲ್ಲ. ಅಂತಹ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿ ಆ ವೆಚ್ಚವನ್ನು ಭರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ, ಚಿಕಿತ್ಸೆಗಳು ಹಾಗೂ ವೆಚ್ಚದ ಪಟ್ಟಿಯನ್ನು ಸಿದ್ಧಪಡಿಸಿದ್ದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಈ ಕುರಿತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ, ಆದೇಶ ಹೊರಡಿಸಿದೆ. ಇದರ ಜೊತೆಗೆ, ಹೆಚ್ಚು ವೆಚ್ಚ ತಗುಲುವ ಕಾಯಿಲೆಗಳ ಚಿಕಿತ್ಸಾ ವಿಧಾನ ಗುರುತಿಸಿ, ಅವುಗಳಿಗೂ ವೆಚ್ಚ ನಿಗದಿ ಮಾಡಲು ಕ್ರಮ ವಹಿಸಲಾ ಗಿದೆ. ಇದಕ್ಕಾಗಿ ಗಿರಿಜನ ಉಪಯೋಜನೆಯಡಿ 7.39 ಕೋಟಿ ರೂ., ಪರಿಶಿಷ್ಟ ಜಾತಿ ಉಪಯೋಜನೆಯಡಿ 15.79 ಕೋಟಿ ಸೇರಿ, ಒಟ್ಟು 23.18 ಕೋಟಿ ರೂ. ಮೊತ್ತವನ್ನು ಪುನರ್ ವಿನಿ ಯೋಗದ ಮೂಲಕ ಬಿಡುಗಡೆ ಮಾಡಿ ಆದೇಶಿಸಲಾಗಿದೆ. ಪಿಇಟಿ ಸ್ಕ್ಯಾನ್‍ಗೆ 10,000 ರೂ., ಅಸ್ತಿ ಮಜ್ಜೆ ಕಸಿಗೆ ಎರಡು ವಿಧಾನಗಳಲ್ಲಿ 7 ಲಕ್ಷ ರೂ. ಹಾಗೂ 21 ಲಕ್ಷ ರೂ., ರೋಬೋ ಟಿಕ್ ಸರ್ಜರಿಗೆ 1.50 ಲಕ್ಷ ರೂ. ಸೇರಿದಂತೆ ವಿವಿಧ ಚಿಕಿತ್ಸೆಗಳಿಗೆ ವೆಚ್ಚ ನಿಗದಿ ಮಾಡಲಾಗಿದೆ ಎಂದು ಡಾ.ಸುಧಾಕರ್ ತಿಳಿಸಿದರು.

Translate »