ಚುನಾವಣಾ ರಾಜಕೀಯಕ್ಕೆ ಯಡಿಯೂರಪ್ಪ ಗುಡ್‍ಬೈ
News

ಚುನಾವಣಾ ರಾಜಕೀಯಕ್ಕೆ ಯಡಿಯೂರಪ್ಪ ಗುಡ್‍ಬೈ

July 23, 2022

ಬೆಂಗಳೂರು, ಜು.22 (ಕೆಎಂಶಿ)-ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ತಮ್ಮಿಂದ ತೆರವಾಗಲಿರುವ ಶಿಕಾರಿಪುರ ವಿಧಾನ ಸಭಾ ಕ್ಷೇತ್ರದಲ್ಲಿ ನನ್ನ ಪುತ್ರ, ಬಿಜೆಪಿಯ ರಾಜ್ಯ ಉಪಾ ಧ್ಯಕ್ಷ ಬಿ.ವೈ.ವಿಜಯೇಂದ್ರ ಚುನಾವಣಾ ಕಣಕ್ಕಿಳಿಯ ಲಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ. ಶಿಕಾರಿ ಪುರ ಕ್ಷೇತ್ರ ವ್ಯಾಪ್ತಿಯ ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೀಗೆ ಹಠಾತ್ತನೆ ತಮ್ಮ ರಾಜಕೀಯ ನಿರ್ಧಾರವನ್ನು ಪ್ರಕಟಿಸಿರುವುದು ರಾಜ್ಯ ಬಿಜೆಪಿಯಲ್ಲಿ ತಲ್ಲಣವುಂಟು ಮಾಡಿದೆ. ವಿಧಾನಸಭಾ ಚುನಾವಣೆಗೆ ಇನ್ನೂ ಹತ್ತು ತಿಂಗಳು ಬಾಕಿ ಇರುವ ಮುನ್ನವೇ ಶಿಕಾರಿ ಪುರ ಕ್ಷೇತ್ರದಿಂದ ನನ್ನ ಪುತ್ರನೇ ಕಣಕ್ಕಿಳಿಯುತ್ತಾನೆ ಎಂದು ಘೋಷಣೆ ಮಾಡಿರುವುದು ಪಕ್ಷದ ನಾಯಕ ರಿಗೆ ಅಚ್ಚರಿವುಂಟು ಮಾಡಿದೆ. ಅಭ್ಯರ್ಥಿಗಳ ಆಯ್ಕೆ ಪಕ್ಷದ ವರಿಷ್ಠರದ್ದೇ ಅಂತಿಮ. ದೆಹಲಿ ನಾಯಕರ ನಿರ್ಧಾರವನ್ನೂ ಕಾಯದೇ
ಘೋಷಣೆ ಮಾಡಿರುವುದು ನಾನಾ ಊಹಾಪೆÇೀಹಗಳಿಗೆ ಕಾರಣವಾಗಿದೆ. ವಿಜಯೇಂದ್ರ ಅವರನ್ನು ಬೊಮ್ಮಾಯಿ ಸಂಪುಟ ದಲ್ಲಿ ಮಂತ್ರಿ ಮಾಡಬೇಕೆಂದು ಬಹಳ ಕಸರತ್ತು ತೆರೆಮರೆಯಲ್ಲಿ ನಡೆಸಿದ್ದರು. ಅಷ್ಟೇ ಅಲ್ಲ ವಿಧಾನಸಭೆ ಯಿಂದ ವಿಧಾನಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ವಿಜಯೇಂದ್ರರಿಗೆ ಟಿಕೆಟ್ ದೊರೆಯುತ್ತದೆ ಎಂಬ ಮಹದಾಸೆ ಇಟ್ಟುಕೊಂಡಿದ್ದರು. ಇದಕ್ಕೆ ಪಕ್ಷದ ವರಿಷ್ಠರು ಅದರಲ್ಲೂ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಯಡಿಯೂರಪ್ಪ ಅವರ ಕನಸಿಗೆ ತಣ್ಣೀರು ಎರಚಿದ್ದರು. ಕನಿಷ್ಠ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಲು ಪ್ರಯತ್ನಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ತಮ್ಮ ಪುತ್ರನಿಗೆ ವಿಧಾನ ಸಭಾ ಚುನಾವಣೆ ಯಲ್ಲಿ ಸ್ಪರ್ಧಿಸಲು ಅವಕಾಶ ನೀಡುತ್ತಾರೋ, ಇಲ್ಲವೋ ಎಂಬ ಅನುಮಾನ ಕಾಡುತ್ತಿತ್ತು. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸುವುದರೊಂದಿಗೆ ತನ್ನದೇ ಕ್ಷೇತ್ರ ಶಿಕಾರಿಪುರದಿಂದಲೇ ಪುತ್ರ ಕಣಕ್ಕಿಯುವುದನ್ನು ಘೋಷಣೆ ಮಾಡಿದರು.

ಚುನಾವಣಾ ಸಂದರ್ಭದಲ್ಲಿ ವರಿಷ್ಠರು ಏನೇ ತೀರ್ಮಾನ ಕೈಗೊಂಡರೂ ವಿಜಯೇಂದ್ರ ಶಿಕಾರಿಪುರದಿಂದ ಕಣಕ್ಕಿಳಿಯುತ್ತಾರೆ ಎಂಬ ಸಂದೇಶವನ್ನು ನಾಯಕರಿಗೆ ರವಾನಿಸಿದ್ದಾರೆ.

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ವಿಜಯೇಂದ್ರಗೆ ಮೈಸೂರಿನ ವರುಣಾ, ಮಂಡ್ಯದ ಕೆ.ಆರ್. ಪೇಟೆ ಸೇರಿದಂತೆ ಹಲವು ವಿಧಾನಸಭಾ ಕ್ಷೇತ್ರಗಳಿಂದ ಚುನಾವಣಾ ಕಣಕ್ಕಿಳಿಯಲು ಒತ್ತಡವಿತ್ತು. ನಾನು ಕ್ಷೇತ್ರ ಖಾಲಿ ಮಾಡುತ್ತಿ ರುವುದರಿಂದ ವಿಜಯೇಂದ್ರ ಶಿಕಾರಿಪುರದಲ್ಲೇ ನಿಲ್ಲುತ್ತಾರೆ ಎಂದರು. ಕ್ಷೇತ್ರದ ಜನತೆ ನನಗಿಂತ ಹೆಚ್ಚಿನ ಅಂತರದಲ್ಲಿ ವಿಜಯೇಂದ್ರ ಅವರಿಗೆ ಗೆಲುವು ತಂದುಕೊಡಬೇಕು ಎಂದು ಮನವಿ ಮಾಡಿದರು ಪಕ್ಷ ಸಂಘಟನೆಗೆ ರಾಜ್ಯದಲ್ಲಿ ಓಡಾಡುತ್ತೇನೆ. ರಾಜ್ಯದಲ್ಲಿ ನೂರಕ್ಕೆ ನೂರು ಭಾರತೀಯ ಜನತಾ ಪಾರ್ಟಿ ಮತ್ತೆ ಅಧಿಕಾರಕ್ಕೆ ಬರುತ್ತದೆ. ಬಿಜೆಪಿಯವರೇ ಮುಖ್ಯಮಂತ್ರಿಯಾಗುತ್ತಾರೆ. ಈ ಬಗ್ಗೆ ಅನುಮಾನ ಬೇಡ ಎಂದರು.

Translate »