ಮಲೇರಿಯಾ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ
ಮಂಡ್ಯ

ಮಲೇರಿಯಾ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ

June 2, 2018

ಮಂಡ್ಯ: ಮಲೇರಿಯಾ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಹಾಗೂ ಎಲ್ಲಾ ಇಲಾಖೆಗಳು ಸಮನ್ವಯತೆ ಯಿಂದ ಕೆಲಸ ನಿರ್ವಹಿಸುವುದು ಅವಶ್ಯಕ ಎಂದು ಅಪರ ಜಿಲ್ಲಾಧಿಕಾರಿ ಬಿ.ಪಿ. ವಿಜಯ್ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಯುಕ್ತ ನಡೆದ ಮಲೇರಿಯಾ ನಿಯಂತ್ರಣ ಕುರಿತ ಜಿಲ್ಲಾ ಮಟ್ಟದ ಅಂತರ ಇಲಾಖೆ ಗಳ ಸಮನ್ವಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಲೇರಿಯಾ ರೋಗ ಹತೋಟಿಗೆ ಸರ್ಕಾರದ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರ ಸಹಕಾರ ಮುಖ್ಯವಾಗಿದ್ದು, ಪ್ರತಿಯೊಂದು ಹಂತದಲ್ಲೂ ಸಾರ್ವ ಜನಿಕರು ಆರೋಗ್ಯ ಇಲಾಖೆ ಜೊತೆ ಸಹಕರಿಸಬೇಕು. ಬೇರೆ ಜಿಲ್ಲೆ ಮತ್ತು ರಾಜ್ಯ ಗಳಿಂದ ವಲಸೆ ಬರುವವರ ಮಾಹಿತಿ ಯನ್ನು ಆರೋಗ್ಯ ಸಹಾಯಕರು ಪಡೆದು ಕೊಳ್ಳಬೇಕು ಎಂದು ತಿಳಿಸಿದರು.
ಗುಂಡಿ ಮತ್ತು ತಗ್ಗುಗಳನ್ನು ಮುಚ್ಚುವ ಮೂಲಕ ನೀರು ಸಂಗ್ರಹವಾಗದಂತೆ ಗ್ರಾಮೀಣ ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು ಹಾಗೂ ನಿಂತ ನೀರು ಸೊಳ್ಳೆ ಉತ್ಪತ್ತಿ ತಾಣವಾಗಿದ್ದು, ನೀರು ತುಂಬಿರುವ ಬೃಹತ್ ಶೇಖರಣೆ ಗಳಲ್ಲಿ ಲಾರ್ವಾ ಹಾರಿ ಮೀನುಗಳನ್ನು ಬಿಡಲು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮವಹಿಸುವಂತೆ ಸಭೆಯಲ್ಲಿ ನಿರ್ದೇಶನ ನೀಡಿದರು.

ಶಾಲಾ ಕಾಲೇಜುಗಳಲ್ಲಿ ಮಲೇರಿಯಾ ರೋಗದ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ತಮ್ಮ ಮನೆ ಗಳಲ್ಲಿ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಸ್ವಚ್ಛವಾಗಿಟ್ಟುಕೊಳ್ಳು ವಂತೆ ಆರೋಗ್ಯ ಇಲಾಖೆ ಜನರಿಗೆ ನಿರಂತರವಾಗಿ ಅರಿವು ಮೂಡಿಸಬೇಕು ಎಂದು ಅವರು ತಿಳಿಸಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಭವನಿ ಶಂಕರ್ ಮಾತನಾಡಿ, ಈ ರೋಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಘನತಾಜ್ಯ ವಸ್ತುಗಳು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವುದು ಮತ್ತು ನೀರು ಸಂಗ್ರಹಿಸುವ ತೊಟ್ಟಿ ಮುಂತಾದವುಗಳಲ್ಲಿ ನೀರನ್ನು ತಪ್ಪದೇ 3 ದಿನಕ್ಕೊಮ್ಮೆ ಖಾಲಿ ಮಾಡಿ ತೊಳೆದು ಮತ್ತೆ ನೀರನ್ನು ಶೇಖರಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯ ನರಸಿಂಹ, ಲೋಕೋಪ ಯೋಗಿ ಇಲಾಖೆ ಕಾರ್ಯಪಾಲಕ ಅಭಿ ಯಂತರ ರಾಮಚಂದ್ರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Translate »