ಪರಿಷ್ಕøತ ಪಠ್ಯಪುಸ್ತಕ ವಾಪಸ್ ಪಡೆಯಲು  ಮಾಜಿ ಪ್ರಧಾನಿ ದೇವೇಗೌಡರ ಒತ್ತಾಯ
News

ಪರಿಷ್ಕøತ ಪಠ್ಯಪುಸ್ತಕ ವಾಪಸ್ ಪಡೆಯಲು ಮಾಜಿ ಪ್ರಧಾನಿ ದೇವೇಗೌಡರ ಒತ್ತಾಯ

June 22, 2022

ಬೆಂಗಳೂರು, ಜೂ.21(ಕೆಎಂಶಿ)- ಪರಿಷ್ಕರಣೆ ಮಾಡಿರುವ ಶಾಲಾ ಪಠ್ಯ ಪುಸ್ತಕಗಳನ್ನು ವಾಪಸ್ ಪಡೆದು ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃ ತ್ವದ 27 ಸಮಿತಿಗಳು ಪರಿಷ್ಕರಿಸಿದ್ದ ಪಠ್ಯ ಪುಸ್ತಕಗಳನ್ನೇ ಈ ವರ್ಷ ಮುಂದುವರೆಸ ಬೇಕೆಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ಪಠ್ಯ ಪುಸ್ತಕಗಳಲ್ಲಿನ ಅಸಂಖ್ಯಾತ ದೋಷ ಮತ್ತು ಅನ್ಯಾಯ ಗಳನ್ನು ಕೇವಲ ತಪೆÇ್ಪೀಲೆ ಅಥವಾ ಪ್ರತ್ಯೇಕ ಪುಟಗಳ ಮುದ್ರಣ ದಿಂದ ಸರಿಪಡಿಸಲು ಸಾಧ್ಯವಿಲ್ಲ. ಹೀಗಾಗಿ ರಾಮಚಂದ್ರಪ್ಪ ನೇತೃತ್ವದ ಸಮಿತಿಯ ಪಠ್ಯ ಪುಸ್ತಕಗಳನ್ನೇ ಈ ವರ್ಷವೂ ಮುಂದುವರೆಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

ಜೂ.18ರಂದು ವಿಶ್ವ ಮಾನವ, ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿದ್ದು, ಸಮಾವೇಶದಲ್ಲಿ ಕೈಗೊಂಡ ಹಕ್ಕೊತ್ತಾಯದ ಅಂಶಗಳನ್ನು ಬೆಂಬಲಿಸಿದ್ದೇನೆ. ಈ ವಿಷಯ ವಾಗಿ ತಾವು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. ಸಮಾಜ ವಿಜ್ಞಾನ ಪಠ್ಯ ಪುಸ್ತಕದ ಏಕೀಕರಣ ಪಾಠದಿಂದ ಕುವೆಂಪು ಅವರ ಭಾವಚಿತ್ರವನ್ನು ತೆಗೆದುಹಾಕಲಾಗಿದೆ. ಬಸವಣ್ಣನವರ ಚಳ ವಳಿಯ ಆಶಯವುಳ್ಳ ಭಾಗಗಳನ್ನು ಕೈಬಿಡಲಾಗಿದೆ. ಸಿದ್ಧಗಂಗಾ ಮತ್ತು ಆದಿಚುಂಚನಗಿರಿ ಶ್ರೀಗಳ ಸೇವೆಯ ವಿವರವನ್ನು ತೆಗೆಯ ಲಾಗಿದೆ. ಅಂಬೇಡ್ಕರ್ ಅವರಿಗೆ ಸಂವಿಧಾನ ಶಿಲ್ಪಿ ಎಂದಿದ್ದ ವಿಶೇಷಣವನ್ನು ತೆಗೆಯಲಾಗಿದೆ. ಕನಕದಾಸ, ಪುರಂದರದಾಸ, ಷರೀಫರಂತಹ ಮಹಾನ್ ದಾರ್ಶನಿಕರ ಪಠ್ಯಗಳನ್ನೇ ತೆಗೆಯ ಲಾಗಿದೆ ಎಂದು ದೇವೇಗೌಡರು ಉಲ್ಲೇಖಿಸಿದ್ದಾರೆ.

ನಾಡಪ್ರಭು ಕೆಂಪೇಗೌಡ, ಸುರಪುರ ನಾಯಕರ ವಿಷಯಗಳನ್ನು ಕಡಿತಗೊಳಿಸಿದ್ದು, ಡಾ.ಅಂಬೇಡ್ಕರ್ ಮತ್ತು ಕುವೆಂಪು ಅವರು ಸಾರಿದ ಸಾಮಾಜಿಕ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ವಿಶ್ವ ಮಾನವತ್ವದ ಪರಿಕಲ್ಪನೆಗಳನ್ನು ಕಡೆಗಣಿಸಿರುವುದು ಪುನರ್ ಪರಿಷ್ಕರಣೆಯಲ್ಲಿ ಎದ್ದು ಕಾಣುತ್ತದೆ ಎಂದಿದ್ದಾರೆ.

ಪಠ್ಯ ಪುಸ್ತಕಗಳ ಮರು ಪರಿಷ್ಕರಣೆಗೆ ನೇಮಿಸಿದ್ದ ಸಮಿತಿ ಅಧ್ಯಕ್ಷರು, ರಾಷ್ಟ್ರಕವಿ ಕುವೆಂಪು ಅವರ ನಾಡಗೀತೆಗೆ ಅಪಮಾನ ಮಾಡಿದ್ದಾರೆ. ನಾಡಗೀತೆಯನ್ನು ಅಸಭ್ಯವಾಗಿ ತಿರುಚಿದವರಿಗೆ ಬಹುಮಾನ ನೀಡುವುದಾಗಿ ಹೇಳಿದ್ದು ಕೂಡ ಕುವೆಂಪು ಅವರಿಗೆ ಮಾಡಿದ ದೊಡ್ಡ ಅವಮಾನ ವಾಗಿದೆ. ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದೂ ನಾಡ ಅಸ್ಮಿತೆಗೆ ಮಾಡಿದ ಅವಮಾನವಾಗಿದೆ. ಜತೆಗೆಡಾ.ಬಿ.ಆರ್. ಅಂಬೇಡ್ಕರ್ ಅವರನ್ನೂ ಹಂಗಿಸಿದ್ದಾರೆ. ಇಂತಹ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದು ಮೊದಲ ತಪ್ಪು. ಮರು ಪರಿಷ್ಕರಣೆಯಲ್ಲಿ ಮಾಡಿರುವ ತಪ್ಪುಗಳಂತೂ ಅಸಂಖ್ಯಾತ.

Translate »