ಸಂವಿಧಾನ, ಪ್ರಜಾಪ್ರಭುತ್ವ ಉಳಿಸಲು ಬಿಜೆಪಿ ಸೋಲಿಸಿ

ಚಾಮರಾಜನಗರ:  ದೇಶದ ಸಂವಿಧಾನ, ಪ್ರಜಾಪ್ರಭುತ್ವ ಉಳಿಯುವ ಸಲುವಾಗಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಬೇಕು. ಈ ಮೂಲಕ ಸಂವಿಧಾನ ಉಳಿಸಿ, ದೇಶವನ್ನು ರಕ್ಷಿಸಬೇಕಾಗಿದೆ ಎಂದು ಸೈನಿಕ ದಳದ ಜಿಲ್ಲಾ ಅಧ್ಯಕ್ಷ ಪಿ.ಸಂಘಸೇನಾ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸಂವಿಧಾನವನ್ನು ಬದಲಾಯಿಸುವ ಹುನ್ನಾರ ನಡೆಸಿದೆ. ಹೀಗಾಗಿ ದಲಿತರು ಬಿಜೆಪಿಗೆ ಮತ ನೀಡಬಾರದು ಎಂದು ಮನವಿ ಮಾಡಿದರು. ಬಿಜೆಪಿ ಸಂವಿಧಾನವನ್ನು ಬದಲಾಯಿಸಿ ಮನು ಶಾಸ್ತ್ರವನ್ನು ಜಾರಿಗೆ ತರುವ ಪ್ರಯತ್ನದಲ್ಲಿ ಇದೆ. ಪ್ರಜಾಪ್ರಭುತ್ವವನ್ನು ನಾಶ ಮಾಡಿ ಪಾಳೇಗಾರಿಕೆ ಸಂಸ್ಕøತಿಯನ್ನು ಜಾರಿಗೊಳಿಸುವ ಪ್ರಯತ್ನದಲ್ಲಿ ಇದೆ. ದೇಶದಲ್ಲಿ ಎರಡೂವರೆ ಸಾವಿರ ಕೋಟಿ ಬ್ಯಾಕ್‍ಲಾಗ್ ಹುದ್ದೆ ಖಾಲಿ ಇದ್ದು, ಇವನ್ನು ಭರ್ತಿ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಹೀಗಾಗಿ ದಲಿತ ಮತದಾರರು ಬಿಜೆಪಿಯನ್ನು ತಿರಸ್ಕರಿಸಬೇಕು. ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿಸುವ ಸಲುವಾಗಿ ಕಾಂಗ್ರೆಸ್ ಬೆಂಬಲಿಸಬೇಕು ಎಂದು ಸಂಘಸೇನಾ ಮನವಿ ಮಾಡಿದರು. ಮುಖಂಡರಾದ ಯರಿಯೂರು ರಾಜಣ್ಣ, ಕೃಷ್ಣರಾಜು, ನಾಗರಾಜು, ಸೋಮಶೇಖರ್, ಆಲೂರು ನಾಗೇಂದ್ರ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.