ತಂಬಾಕು ಮುಕ್ತ ಕಾಲೇಜು, ತಂಬಾಕು ವರ್ಜನಾ ಕೇಂದ್ರ   ಸೇವಾ ಸೌಲಭ್ಯಗಳ ಕುರಿತು ತರಬೇತಿ ಕಾರ್ಯಾಗಾರ
ಮೈಸೂರು

ತಂಬಾಕು ಮುಕ್ತ ಕಾಲೇಜು, ತಂಬಾಕು ವರ್ಜನಾ ಕೇಂದ್ರ  ಸೇವಾ ಸೌಲಭ್ಯಗಳ ಕುರಿತು ತರಬೇತಿ ಕಾರ್ಯಾಗಾರ

December 13, 2020

ಮೈಸೂರು, ಡಿ.12-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಸರ್ವೇಕ್ಷಣಾ ಘಟಕದ ವತಿಯಿಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗಾಗಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು, ಕೋಟ್ಪಾ-2003ರ ಕಾಯ್ದೆ, ತಂಬಾಕು ಮುಕ್ತ ಕಾಲೇಜು ಹಾಗೂ ತಂಬಾಕು ವರ್ಜನಾ ಕೇಂದ್ರ ಸೇವಾ ಸೌಲಭ್ಯಗಳ ಕುರಿತು ಜೆಎಲ್‍ಬಿ ರಸ್ತೆಯಲ್ಲಿರುವ ಗುರು ರೆಸಿಡೆನ್ಸಿ ಸಭಾಂ ಗಣದಲ್ಲಿ ತರಬೇತಿ ಕಾರ್ಯಾಗಾರ ನೆರವೇರಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಅಮರ್‍ನಾಥ್ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿ, ದುಶ್ಚಟಗಳ ಬಳಕೆ ಯಿಂದ ಸಮಾಜದ ಮೇಲಾಗುವ ದುಷ್ಪರಿಣಾಮಗಳು, ಆರ್ಥಿಕ ಪರಿಣಾಮಗಳು ಹಾಗೂ ತಂಬಾಕು ಸೇವನೆಯಿಂದ ಯುವ ಪೀಳಿಗೆಯ ಮೇಲಾಗುವ ದುಷ್ಪರಿಣಾಮಗಳು ಅವುಗಳನ್ನು ನಿಯಂತ್ರಿಸುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ಪದವಿ ಪೂರ್ವ ಶಿಕ್ಷಣ ಮತ್ತು ವೃತ್ತಿ ಇಲಾಖೆ ಉಪ ನಿರ್ದೇಶಕಿ ಗೀತಾ ಕಾರ್ಯಾಗಾರ ಉದ್ಘಾಟಿಸಿದರು. ಇದೇ ವೇಳೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಪ್ರಸಾದ್, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸಮುದಾಯ ವೈದ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಮುದಸ್ಸಿರ್ ಅಜೀಜ್‍ಖಾನ್, ಜಿಲ್ಲಾ ಸರ್ವೇಕ್ಷಣಾ ಘಟಕ ಕಾರ್ಯಕ್ರಮ ಸಂಯೋಜಕಿ ಎನ್.ಸಿ.ಡಿ ಡಾ.ಅರ್ಚನಾ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಸಲಹೆಗಾರ ಶಿವಕುಮಾರ್, ನವೀದುಲ್ಲಾ ಷರೀಫ್ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

 

 

 

 

 

Translate »