ಇಂದು ಬಸವ ಜಯಂತಿ ಆಚರಣೆ ಕಾರ್ಯಕ್ರಮ
ಚಾಮರಾಜನಗರ

ಇಂದು ಬಸವ ಜಯಂತಿ ಆಚರಣೆ ಕಾರ್ಯಕ್ರಮ

October 22, 2018

ಚಾಮರಾಜನಗರ: ಜಿಲ್ಲಾಡ ಳಿತ, ಜಿಲ್ಲಾ ಪಂಚಾ ಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಬಸವ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ 22ರಂದು ಚಾ.ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಜಾನಪದ ಕಲಾತಂಡಗಳೊಡನೆ ಶ್ರೀ ಜಗಜ್ಯೋತಿ ಬಸವೇಶ್ವರರ ಭಾವಚಿತ್ರ ಮೆರವಣಿಗೆ ಆರಂಭವಾಗಲಿದೆ.

ಬೆಳಿಗ್ಗೆ 11 ಗಂಟೆಗೆ ಪೇಟೆ ಪ್ರೈಮರಿ ಶಾಲಾ ಅವರಣದಲ್ಲಿ ನಡೆಯಲಿರುವ ಸಮಾ ರಂಭದ ದಿವ್ಯ ಸಾನಿಧ್ಯವನ್ನು ನಗರದ ಶ್ರೀ ಸಿದ್ದಮಲ್ಲೇಶ್ವರ ವಿರಕ್ತ ಮಠದ ಶ್ರೀ ಚನ್ನಬಸವಸ್ವಾಮಿಗಳು ವಹಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಉದ್ಘಾಟನೆ ನೆರವೇರಿಸಿ ಅಧ್ಯಕ್ಷತೆ ವಹಿಸು ವರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಿವಮ್ಮ ಘನ ಉಪಸ್ಥಿತರಿರುವರು. ಸಂಸದ ಆರ್. ಧ್ರುವನಾರಾಯಣ ಬಸವೇಶ್ವರರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ಶಾಸಕರಾದ ಆರ್.ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇ ಗೌಡ, ಎಸ್.ನಾಗರಾಜು (ಸಂದೇಶ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಜೆ. ಯೋಗೀಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಸಮಾರಂಭದ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಮುಡುಕನಪುರ ಹಲವಾರ ಮಠದ ಶ್ರೀಷಡಕ್ಷರ ದೇಶಿಕೇಂದ್ರ ಮಹಾಸ್ವಾಮಿ ಅವರು ವಿಶೇಷ ಉಪನ್ಯಾಸ ನೀಡುವರು. ಬೆಳಿಗ್ಗೆ 9.30 ಗಂಟೆಗೆ ಸಮಾರಂಭದ ಮುಖ್ಯ ವೇದಿಕೆಯಲ್ಲಿ ನಗರದ ಕದಳೀ ಮಹಿಳಾ ವೇದಿಕೆ ವತಿಯಿಂದ ವಚನ ಗಾಯನ ಕಾರ್ಯಕ್ರಮ ಏರ್ಪಾಡು ಮಾಡ ಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Translate »