ಇಂದು `ಭಾರತ್ ಬಂದ್’
ಮೈಸೂರು

ಇಂದು `ಭಾರತ್ ಬಂದ್’

September 10, 2018

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಳೆ (ಸೋಮವಾರ) ಕರೆ ನೀಡಿರುವ ಭಾರತ್ ಬಂದ್‍ಗೆ ಜೆಡಿಎಸ್ ಕೂಡಾ ಬೆಂಬಲ ವ್ಯಕ್ತ ಪಡಿಸಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಸಾಮಾನ್ಯ ಜನ ಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.

ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವ ರೆಗೂ ಬಂದ್‍ಗೆ ಕರೆ ನೀಡಲಾಗಿದ್ದು, ಕೆಎಸ್ ಆರ್‍ಟಿಸಿ ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟ ಬೆಂಬಲ ವ್ಯಕ್ತಪಡಿಸಿರುವುದರಿಂದ ರಾಜ್ಯಾದಾದ್ಯಂತ ಬಸ್‍ಗಳು ರಸ್ತೆಗೆ ಇಳಿಯು ವುದು ಅನುಮಾನ. ಹಿಂಸಾಚಾರದಂತಹ ಘಟನೆ ಹಿನ್ನೆಲೆಯಲ್ಲಿ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಬಿಎಂ ಟಿಸಿ ಹಾಗೂ ಕೆಎಸ್‍ಆರ್‍ಟಿಸಿ ಅಧಿಕೃತ ವಾಗಿ ಹೇಳಿಕೆ ನೀಡಿವೆ.

ನಮ್ಮ ಮೆಟ್ರೋ ರೈಲು ಸಂಚಾರ ಎಂದಿ ನಂತೆ ಸಾಗಲಿದೆ. ಆದರೆ, ಒಂದು ವೇಳೆ ಪೆÇಲೀಸರು ಸಲಹೆ ಮಾಡಿದರೆ ಬಂದ್ ಮಾಡಲಾಗುವುದು. ಈ ಸಂಬಂಧ ನಾಳೆ ಬೆಳಿಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳ ಲಾಗುವುದು ಎಂದು ಅಧಿಕಾರಿಗಳು ತಿಳಿಸಿ ದ್ದಾರೆ. ಆದಾಗ್ಯೂ, ಕೆಲ ಆಟೋರಿಕ್ಷಾ ಒಕ್ಕೂಟಗಳು ಕಾರ್ಯಾಚರಣೆ ನಡೆಸುವು ದಾಗಿ ತಿಳಿಸಿವೆ. ಸಿಲಿಂಡರ್ ಬೆಲೆಯಲ್ಲಿ ಪರಿ ಣಾಮ ಬೀರಿಲ್ಲ. ಆದ್ದರಿಂದ ಬಂದ್‍ಗೆ ಬೆಂಬಲ ನೀಡುವುದಿಲ್ಲ, ಎಂದಿನಂತೆ ಆಟೋ ಗಳು ಕಾರ್ಯಾಚರಣೆ ನಡೆಸಲಿವೆ ಎಂದು ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಎಂ.ಮಂಜುನಾಥ್ ಹೇಳಿದ್ದಾರೆ.

ರಾಜ್ಯ ಲಾರಿ ಮಾಲೀಕರ ಸಂಘ ಕೂಡಾ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದೆ. ಡೀಸೆಲ್ ಬೆಲೆಯಲ್ಲಿ ಏರಿಕೆ ವಿರೋಧಿಸಿ ಬಂದ್ ನಡೆ ಯುತ್ತಿರುವುದರಿಂದ ಬಂದ್ ಬೆಂಬಲಿಸು ವುದಾಗಿ ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಚನ್ನಾರೆಡ್ಡಿ ಹೇಳಿದ್ದಾರೆ. ಕೆಲ ಖಾಸಗಿ ಶಾಲೆಗಳಿಗೆ ಈಗಾಗಲೇ ರಜೆ ಘೋಷಿಸ ಲಾಗಿದೆ. ಸರ್ಕಾರ ಶಾಲೆಗಳಿಗೆ ನಾಳೆ ಹಲವು ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಭಾರತ್ ಬಂದ್ ಕರೆಗೆ ಟ್ಯಾಕ್ಸಿ ಮಾಲೀಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಂದ್ ನಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಬೆಂಗಳೂರು ಟೂರಿಸ್ಟ್ ಟ್ಯಾಕ್ಸಿ ಮಾಲೀಕರ ಸಂಘದ ಅಧ್ಯಕ್ಷ ಕೆ.ರಾಧಾಕೃಷ್ಣ ಹೊಳ್ಳ ತಿಳಿಸಿದ್ದಾರೆ. ಆದಾಗ್ಯೂ, ಓಲಾ ಮತ್ತು ಉಬರ್ ಚಾಲಕರು ಮತ್ತು ಮಾಲೀಕರ ಸಂಘ ಬಂದ್‍ಗೆ ಬೆಂಬಲ ವ್ಯಕ್ತ ಪಡಿಸಿದ್ದು, ನಾಳೆ ಕೆಲಸಕ್ಕೆ ಬರದಂತೆ ಚಾಲ ಕರಿಗೆ ತಿಳಿಸಿದೆ. ಬೆಳಿಗ್ಗೆ 6ರಿಂದ ಸಂಜೆ 6ರ ವರೆಗೂ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿ ಟೌನ್‍ಹಾಲ್ ಮುಂಭಾಗ ಪ್ರತಿಭಟನೆ ಮಾಡುವುದಾಗಿ ಯೂನಿಯನ್ ಅಧ್ಯಕ್ಷ ತನ್ವೀರ್ ಪಾಶ ತಿಳಿಸಿದ್ದಾರೆ. ಕನ್ನಡ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ರಾಜಭವನ ಮುತ್ತಿಗೆ ಹಾಕಲು ಯೋಜನೆ ಹಾಕಿಕೊಂಡಿದೆ. ಅಗತ್ಯ ಸೇವೆಗಳಾದ ಔಷಧಿ ಮಳಿಗೆ, ಆಸ್ಪತ್ರೆ, ತರಕಾರಿ, ಹಾಲು ಸರಬರಾಜು, ತುರ್ತು ಸೇವೆಗಳನ್ನು ಹೊರತುಪಡಿಸಿ ಸರ್ಕಾರಿ ಕಚೇರಿಗಳು, ಬ್ಯಾಂಕುಗಳು ಮುಚ್ಚುವ ಸಾಧ್ಯತೆಗಳಿವೆ. ಬಂದ್ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಲು ಕ್ರಮ ಕೈಗೊಳ್ಳುವುದಾಗಿ ಪೆÇಲೀಸರು ತಿಳಿಸಿದ್ದಾರೆ.

Translate »