ಮಡಿಕೇರಿ: ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಜನಸಂಪರ್ಕ ಸಭೆಯು ಜ.19 ರಂದು ಬೆಳಗ್ಗೆ 10 ರಿಂದ 11.30 ಗಂಟೆ ವರೆಗೆ ಸೋಮವಾರಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಜನ ಸಂಪರ್ಕ ಸಭೆಯು ಜನವರಿ 19 ರಂದು ಮಧ್ಯಾಹ್ನ 12.30 ಗಂಟೆಯಿಂದ 2 ಗಂಟೆವರೆಗೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.
ಸೋಮವಾರಪೇಟೆ ಮತ್ತು ಕುಶಾಲನಗರ ವ್ಯಾಪ್ತಿಯ ಸಾರ್ವಜನಿಕರು, ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಭೆಗೆ ಹಾಜರಾಗುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.