ಸೋ.ಪೇಟೆಯಲ್ಲಿ ಇಂದು ಡಿಕೆಶಿ ಪ್ರಚಾರ
ಕೊಡಗು

ಸೋ.ಪೇಟೆಯಲ್ಲಿ ಇಂದು ಡಿಕೆಶಿ ಪ್ರಚಾರ

May 7, 2018

ಮಡಿಕೇರಿ: ಸಚಿವ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೇ 7 ರಂದು ಬೆಳಗ್ಗೆ 11 ಗಂಟೆಗೆ ಸೋಮ ವಾರಪೇಟೆಯ ಜೆಸಿ ವೇದಿಕೆಯಲ್ಲಿ ನಡೆಯುವ ಕಾಂಗ್ರೆಸ್ ಅಭ್ಯರ್ಥಿ ಕೆ.ಪಿ.ಚಂದ್ರಕಲಾ ಅವರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯ ದರ್ಶಿ ವಿ.ಪಿ.ಸುರೇಶ್ ತಿಳಿಸಿದ್ದಾರೆ.

ಕೆಪಿಸಿಸಿ ಹಿರಿಯ ಮುಖಂಡರು ಹಾಗೂ ಡಿಸಿಸಿ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿರುವರು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

Translate »