ಮಡಿಕೇರಿ: ಜಿಲ್ಲಾಡಳಿತ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 120ನೇ ಜನ್ಮ ದಿನಾಚರಣೆಯು ಜ.28 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ.
ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 10 ಗಂಟೆಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಮುಖ್ಯ ರಸ್ತೆ ಮೂಲಕ ಮೆರ ವಣಿಗೆ ನಡೆಯಲಿದೆ.