ಇಂದು ಹೆಚ್.ಎಸ್. ಮಹದೇವಪ್ರಸಾದ್ ಒಂದು ನೆನಪು
ಚಾಮರಾಜನಗರ

ಇಂದು ಹೆಚ್.ಎಸ್. ಮಹದೇವಪ್ರಸಾದ್ ಒಂದು ನೆನಪು

January 11, 2020

ಚಾಮರಾಜನಗರ, ಜ.10(ಎಸ್‍ಎಸ್)- ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಜನವರಿ 11 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನ ದಲ್ಲಿ ಮಾಜಿ ಸಚಿವರಾದ ಹೆಚ್.ಎಸ್. ಮಹದೇವಪ್ರಸಾದ್ ಒಂದು ನೆನಪು ಕಾರ್ಯಕ್ರಮ ಆಯೋಜಿಸಲಾಗಿದೆ.

ಮಾಜಿ ಸಚಿವ ಕೃಷ್ಣಭೈರೇಗೌಡ ಕಾರ್ಯ ಕ್ರಮವನ್ನು ಉದ್ಘಾಟಿಸುವರು. ಆರ್. ಧ್ರುವ ನಾರಾಯಣ್ ನೇತೃತ್ವ ವಹಿಸುವರು. ಸಿ. ಪುಟ್ಟರಂಗಶೆಟ್ಟಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವರು. ಗೀತಾಮಹದೇವಪ್ರಸಾದ್ ಅವರಿಗೆ ಆರ್. ನರೇಂದ್ರ ಗೌರವ ಸಮರ್ಪಿ ಸುವರು. ಪಿ. ಮರಿಸ್ವಾಮಿ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ಡಾ. ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಧರ್ಮಸೇನಾ ಇತರರು ಪಾಲ್ಗೊಳ್ಳುವರು.

ಗುಂಡ್ಲುಪೇಟೆ ವರದಿ(ಸೋಮ್.ಜಿ): ಅಭಿವೃದ್ಧಿಯ ಹರಿಕಾರರಾಗಿದ್ದ ಮಾಜಿ ಸಚಿವ ಎಚ್.ಎಸ್.ಮಹದೇವಪ್ರಸಾದ್ ಅವರ ನೆನಪು ಕಾರ್ಯಕ್ರಮವನ್ನು ಚಾಮರಾಜ ನಗರದಲ್ಲಿ ಆಯೋಜಿಸಲಾಗಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಎಚ್.ಎಂ. ಗಣೇಶ್‍ಪ್ರಸಾದ್ ಹೇಳಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕ್ಷೇತ್ರದ ಹಾಗೂ ಜಿಲ್ಲೆಯ ಅಭಿವೃದ್ಧಿಯ ಹರಿಕಾರರಾಗಿದ್ದ ಮಾಜಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ಅವರ ನೆನಪಿಗಾಗಿ ವಿಶೇಷ ಕಾರ್ಯಕ್ರಮವನ್ನು ಚಾಮರಾಜ ನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿ ಕೊಳ್ಳಲಾಗಿದೆ. ಈ ಕಾರ್ಯಕ್ರಮವು ಡಾ.ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಜ.11 ಶನಿವಾರ ಬೆಳಗ್ಗೆ 10 ಗಂಟೆ ನಡೆಯಲಿದ್ದು, ಮಹದೇವಪ್ರಸಾದ್ ಅಭಿಮಾನಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದರು.

Translate »