ಇಂದು ರೆಡ್‍ಕ್ರಾಸ್ ಸಂಸ್ಥೆಯಿಂದ ಪ್ರಥಮ ಚಿಕಿತ್ಸೆ ಅರಿವು ಕಾರ್ಯಕ್ರಮ
ಮೈಸೂರು

ಇಂದು ರೆಡ್‍ಕ್ರಾಸ್ ಸಂಸ್ಥೆಯಿಂದ ಪ್ರಥಮ ಚಿಕಿತ್ಸೆ ಅರಿವು ಕಾರ್ಯಕ್ರಮ

October 27, 2021

ಮೈಸೂರು, ಅ.26(ಆರ್‍ಕೆಬಿ)- ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಮೈಸೂರು ಜಿಲ್ಲಾ ಶಾಖೆಯ ವತಿಯಿಂದ ರೆಡ್‍ಕ್ರಾಸ್ ಸಂಸ್ಥೆಯ ಶತಮಾನೋತ್ಸವ ಅಂಗವಾಗಿ ಅ.27 ಮತ್ತು 30ರಂದು ಪ್ರಥಮ ಚಿಕಿತ್ಸೆ ಅರಿವು ಕಾರ್ಯಕ್ರಮ ಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಯುವ ರೆಡ್ ಕ್ರಾಸ್ ಘಟಕದ ಸಂಯೋ ಜಕ ಡಾ.ಕೆ.ಎಂ.ವೀರಯ್ಯ ತಿಳಿಸಿದರು. ಮೈಸೂರು ಪತ್ರಕರ್ತರ ಭವನದಲ್ಲಿ ಮಂಗಳ ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸ್ಥೆಯ ಈ ವರ್ಷದ ಶತಮಾನೋತ್ಸವದ ಆಚರಣೆ ಹಿನ್ನೆಲೆಯಲ್ಲಿ ರಕ್ತದಾನ, ಆರೋಗ್ಯ ತಪಾಸಣೆ ಇನ್ನಿತರೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ದೇಶದಾದ್ಯಂತ ಆಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಮೈಸೂರಿನಲ್ಲಿಯೂ ಕಾರ್ಯಕ್ರಮಗಳು ನಡೆಯುತ್ತಿವೆ ಎಂದರು.
ಅ.27ರಂದು ಬೆಳಗ್ಗೆ 10.30ರಿಂದ ಸಂಜೆ 5.30ರವರೆಗೆ ನಗರದ ಮಹಾರಾಜ ಕಾಲೇಜು ಆವರಣದಲ್ಲಿ 100 ಮಂದಿಗೆ ಪ್ರಥಮ ಚಿಕಿತ್ಸೆ ಅರಿವು ಶಿಬಿರ ನಡೆಯಲಿದೆ. ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ ಪೆÇ್ರ.ಆರ್. ಶಿವಪ್ಪ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ಮಹಾರಾಜ ಕಾಲೇಜಿನ ಪ್ರಾಚಾರ್ಯರಾದ ಪೆÇ್ರ.ಅನಿತಾ ವಿಮಲ ಬ್ರ್ಯಾಗ್ಸ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಭಾಪತಿ ಡಾ.ಕೆ.ಬಿ.ಗುರುಮೂರ್ತಿ ಇನ್ನಿತರರು ಭಾಗವಹಿಸುವರು ಎಂದು ತಿಳಿಸಿದರು. ಅ.30ರಂದು ಬೆಳಗ್ಗೆ 10.30ಕ್ಕೆ ಸಮಾರೋಪ ಸಮಾರಂಭದಲ್ಲಿ ನಗರಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್ ಇತರರು ಉಪಸ್ಥಿತರಿರುವರು ಎಂದರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆ ಉಪಾಧ್ಯಕ್ಷರಾದ ಲಕ್ಷ್ಮೀದೇವಿ, ಕಾರ್ಯದರ್ಶಿ ಪೆÇ್ರ.ಎಂ.ಮಹದೇವಪ್ಪ ಉಪಸ್ಥಿತರಿದ್ದರು.

Translate »