ಇಂದು ಬಂಡೀಪುರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ
ಚಾಮರಾಜನಗರ

ಇಂದು ಬಂಡೀಪುರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

August 9, 2018

ಗುಂಡ್ಲುಪೇಟೆ:  ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆಯ ಸಹಯೋದಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾ ನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಗಳಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಆ.9 (ಗುರುವಾರ) ರಂದು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾ.ಬಾಬು ತಿಳಿಸಿದ್ದಾರೆ.

ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಆಗಸ್ಟ್ 9 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯ ತನಕ ನೇತ್ರ ತಪಾಸಣೆಯನ್ನು ಮತ್ತು ವೈದ್ಯಕೀಯ ಸಲಹೆಯನ್ನು ನೀಡಲಾಗು ವುದು. ಶಿಬಿರದಲ್ಲಿ ತಮಿಳುನಾಡಿನ ಅರವಿಂದ ನೇತ್ರಾಲಯದ ತಜ್ಞ ವೈದ್ಯರು ಆಗಮಿಸಿಲಿದ್ದಾರೆ. ಬಂಡೀಪುರ ಸುತ್ತ ಮುತ್ತಲಿನ ಗ್ರಾಮಸ್ಥರು ಸಹ ಈ ಪ್ರಯೋ ಜನವನ್ನು ಪಡೆಯಬಹುದಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Translate »