ರಾಜ್ಯದಲ್ಲಿ ಶಾಲೆಗಳ ಆರಂಭ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ
ಮೈಸೂರು

ರಾಜ್ಯದಲ್ಲಿ ಶಾಲೆಗಳ ಆರಂಭ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

November 23, 2020

ಬೆಂಗಳೂರು, ನ.22-ಬೇರೆ ರಾಜ್ಯಗಳಿಗೆ ಹೋಲಿ ಸಿದರೆ ಕೊರೊನಾ ಕೇಸ್ ಕಡಿಮೆ ಎಂಬ ಕಾರಣಕ್ಕೆ ಇದೀಗ ರಾಜ್ಯ ಸರ್ಕಾರ ಶಾಲೆಗಳನ್ನು ಆರಂಭಿಸಲು ಮುಂದಾ ಗಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ವರದಿ ಯನ್ನು ತಯಾರಿಸಿ ಮುಖ್ಯಮಂತ್ರಿಗೆ ಸಲ್ಲಿ ಸಿದೆ. ಈ ಹಿನ್ನೆಲೆ ನಾಳೆ (ಸೋಮವಾರ) ಮುಖ್ಯ ಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಶಿಕ್ಷಣ ಇಲಾಖೆ ಜೊತೆ ಜರುಗುವ ಸಭೆ ಸಾಕಷ್ಟು ಮಹತ್ವ ಪಡೆದಿದೆ. ರಾಜ್ಯದಲ್ಲಿ ಕಾಲೇಜು ನಂತರ ಶಾಲೆಗಳು ಆರಂಭವಾಗುತ್ತಾ? ಈ ಪ್ರಶ್ನೆಗೆ ವಿಧಾನಸೌಧದಲ್ಲಿ ನಾಳೆ ಸಿಎಂ ನೇತೃತ್ವದಲ್ಲಿ ಜರುಗುವ ಸಭೆಯಲ್ಲಿ ಉತ್ತರ ಸಿಗಲಿದೆ. ನಾಳೆ ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಸಭೆ ಯಲ್ಲಿ ಕಾಲೇಜಿನಂತೆ ಶಾಲೆ ತೆರೆಯುವ ಕುರಿತು ನಿರ್ಧಾರ ಗೊತ್ತಾಗಲಿದೆ. ರಾಜ್ಯ ದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮುಖದಲ್ಲಿ ಮಹತ್ವದ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಮತ್ತು ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಶಾಲೆಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಆಯುಕ್ತ ಅನ್ಬುಕುಮಾರ್ ಸಿದ್ಧಪಡಿಸಿದ ವರದಿಯನ್ನು ಸಚಿವ ಸುರೇಶ್‍ಕುಮಾರ್ ಸಿಎಂ ಮುಂದಿಡಲಿದ್ದಾರೆ. ವರದಿ ಯಲ್ಲಿ ಪೆÇೀಷಕರು, ವಿದ್ಯಾರ್ಥಿಗಳು, ಶಾಲಾ ಆಡಳಿತ ಮಂಡಳಿಗಳು, ಶಿಕ್ಷಕರು ನೀಡಿದ ಅಭಿಪ್ರಾಯಗಳು ಇವೆ. ಇದರಲ್ಲಿ ಡಿಸೆಂಬರ್ 2ನೇ ವಾರದಿಂದ ಎಸ್‍ಎಸ್‍ಎಲ್‍ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜು ಪ್ರಾರಂಭಿಸಬಹುದು ಎಂದು ಶಿಕ್ಷಣ ಇಲಾಖೆಯ ಶಿಫಾರಸ್ಸು ಮಾಡಲಾಗಿತ್ತು. ಇನ್ನು ನಾಳೆ ಶಾಲೆ ಆರಂಭ ಕುರಿತು ಬಗ್ಗೆ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ಹಿನ್ನೆಲೆ ಖಾಸಗಿ ಶಾಲೆಗಳ ಒಕ್ಕೂಟದಿಂದ ಮತ್ತೊಮ್ಮೆ ಸಿಎಂಗೆ ಮನವಿ ಮಾಡಲಾಗಿದೆ. ಸಭೆಯಲ್ಲಿ ನಮಗೂ ಆರೋಗ್ಯ ಸೌಲಭ್ಯ ನೀಡಬೇಕು. ಈ ವರ್ಷವನ್ನು ಶೂನ್ಯ ವರ್ಷ ಎಂದು ಪರಿಗಣಿಸ ಬಾರದು. ಅಕಾಡೆಮಿಕ್ ಇಯರ್‍ನನ್ನು ರೀ ಡಿಸೈನ್ ಮಾಡಬೇಕು. ಶಾಲಾ ಸಿಬ್ಬಂದಿಗೆ ಉಚಿತ ಕೋವಿಡ್ ಪರೀಕ್ಷೆ ಹಾಗೂ ಆರೋಗ್ಯ ವಿಮೆ ಮಾಡಿಸಬೇಕು. 9 ರಿಂದ 12 ತರಗತಿ ಆರಂಭಿಸಬೇಕು. ಈ ಮನವಿಗಳನ್ನು ಗಮನಿಸಿ ಸಿಎಂ ನಿರ್ಧಾರ ತೆಗೆದುಕೊಳ್ಳಬೇಕು. ಕೇವಲ ಶಾಲಾ-ಕಾಲೇಜು ಆರಂಭ ಮಾಡುವುದು ಅಲ್ಲ. ಅದರೊಂದಿಗೆ ಹಲವಾರು ಸಮಸ್ಯೆಗಳಿವೆ. ಅವುಗಳನ್ನ ಪರಿಗಣನೆಗೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಕಾರ್ಯದರ್ಶಿ ಶಶಿಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಈಗಾಗಲೇ ಶಾಲೆ ಆರಂಭದ ವಿಚಾರವಾಗಿ ನವೆಂಬರ್ 4 ರಿಂದ 8ರವರೆಗೆ ಸರಣಿ ಸಭೆಗಳು ಶಿಕ್ಷಣ ಸಚಿವರಿಂದ ಜರುಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ಖಾಸಗಿ ಶಾಲೆಗಳ ಒಕ್ಕೂಟ, ಎಸ್‍ಡಿಎಂಸಿ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಬಿಬಿಎಂಪಿ, ಪೆÇೀಷಕರು, ಸೇರಿದಂತೆ ಹಲವು ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಗಿದೆ. ಸದ್ಯ ಈ ಮಾಹಿತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಕೈಯಲ್ಲಿದ್ದು ನಾಳೆ ಮುಖ್ಯಮಂತ್ರಿ ಯಡಿಯೂರಪ್ಪನವರ ಕೈ ಸೇರಲಿದೆ. ಇನ್ನೂ ಈ ವರದಿ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಡಿಸೆಂಬರ್ 2ನೇ ವಾರದಲ್ಲಿ 9 ರಿಂದ 12 ತರಗತಿ ಆರಂಭ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸದ್ಯ ಕೊರೊನಾ 2ನೇ ಅಲೆ ಆತಂಕವಿದೆ. ದೇಶದಲ್ಲಿ ಹರಿಯಾಣ, ಗುಜರಾತ್, ಮಹಾರಾಷ್ಟ್ರ ಸರ್ಕಾರಗಳು ಸದ್ಯಕ್ಕೆ ಶಾಲೆ ಬೇಡ ಅಂತ ನಿರ್ಧರಿಸಿವೆ.

 

 

Translate »