ಬೆಂಗಳೂರು, ಮೇ 7(ಕೆಎಂಶಿ)-ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ಹರಡು ತ್ತಿರುವುದನ್ನು ತಡೆಗಟ್ಟಲು ಹಾಗೂ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಗೆ ಸಂಬಂ ಧಿಸಿದಂತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ (ಶುಕ್ರವಾರ) ಸರ್ವಪಕ್ಷಗಳ ಮುಖಂಡರ ಸಭೆ ಕರೆದಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಸಭೆ ನಡೆಯಲಿದೆ. ರಾಜ್ಯದ ಜನತೆ ಎದುರಿಸುತ್ತಿರುವ ಸಮಸ್ಯೆ ಹಾಗೂ ರೋಗ ಹತ್ತಿಕ್ಕುವ ಸಲುವಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿಯವರು ಪ್ರತಿಪಕ್ಷಗಳ ಮುಖಂಡರ ಗಮನಕ್ಕೆ ತರಲಿದ್ದಾರೆ. ಅಷ್ಟೇ ಅಲ್ಲದೆ ರೋಗಾಣು ಹತ್ತಿಕ್ಕಲು ಸಲಹೆಗಳನ್ನು ಪಡೆಯಲಿದ್ದಾರೆ.