ಇಂದು ಕನಕದಾಸರಜಯಂತಿ
ಮೈಸೂರು

ಇಂದು ಕನಕದಾಸರಜಯಂತಿ

November 11, 2022

ಮೈಸೂರು: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ಶ್ರೀ ಕನಕದಾಸ ಜಯಂತೋ ತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ನಾಳೆ (ನ.11) ಬೆಳಗ್ಗೆ 9.30ಕ್ಕೆ ಮೈಸೂರಿನ ಶ್ರೀ ಕೋಟೆ ಆಂಜನೇಯಸ್ವಾಮಿ ದೇವ ಸ್ಥಾನದ ಮುಂಭಾಗದಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕದ ಕಲಾಮಂದಿರ ದಲ್ಲಿ ಕನಕದಾಸ ಜಯಂತಿಯ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸುವರು. ಮುಖ್ಯ ಭಾಷಣ ಕಾರರಾಗಿ ಸಾಹಿತಿಗಳು ಹಾಗೂ ಪ್ರಾಧ್ಯಾಪಕರಾದ ಡಾ.ಚಿಕ್ಕಮಗ ಳೂರು ಗಣೇಶ ಅವರು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೇಯರ್ ಶಿವಕುಮಾರ್, ಸಂಸದರಾದ ಪ್ರತಾಪ್‍ಸಿಂಹ, ವಿ.ಶ್ರೀನಿವಾಸ್ ಪ್ರಸಾದ್, ಸುಮಲತಾ ಅಂಬ ರೀಶ್, ವಿಧಾನಸಭೆ ಹಾಗೂ ವಿಧಾನ ಪರಿಷತ್‍ನ ಶಾಸಕರುಗಳು ಹಾಗೂ ನಿಗಮ ಮಂಡಳಿ ಅಧ್ಯಕ್ಷರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Translate »