ಇಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ
ಮೈಸೂರು

ಇಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ

December 29, 2019

ಮೈಸೂರು, ಡಿ.28- ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ವತಿಯಿಂದ ಕುವೆಂಪು ಅವರ 116ನೇ ಜನ್ಮದಿನೋ ತ್ಸವದ ಅಂಗವಾಗಿ ‘ಕುವೆಂಪು ಚಿಂತನೆಗಳ ಅನುಸಂಧಾನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಡಿ.29ರಂದು ಬೆಳಿಗ್ಗೆ 10.30ಕ್ಕೆ ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂ ಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಬೆಂಗಳೂರಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಪ್ರೊ.ಬಸವರಾಜ ಕಲ್ಗುಡಿ ಉದ್ಘಾಟಿಸಲಿದ್ದು, ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎನ್.ಎಂ.ತಳ ವಾರ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎನ್.ಎಂ.ತಳವಾರ್ ವಹಿಸಲಿದ್ದು, ಬೆಂಗಳೂರು ವಿವಿ ಇಂಗ್ಲಿಷ್ ಪ್ರಾಧ್ಯಾಪಕ ಪ್ರೊ.ನಟರಾಜ ಹುಳಿಯಾರ್ ಸಮಾರೋಪ ನುಡಿಯನ್ನಾಡಲಿದ್ದಾರೆ.

Translate »