ಇಂದು ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಂಸ್ಥಾಪನಾ ದಿನಾಚರಣೆ
ಮೈಸೂರು

ಇಂದು ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಂಸ್ಥಾಪನಾ ದಿನಾಚರಣೆ

May 26, 2018

ಮೈಸೂರು:  ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರ್ಸ್‍ನಲ್ಲಿ ಮೇ 26ರ ಸಂಜೆ 6 ಗಂಟೆಗೆ ಸಂಸ್ಥಾಪನಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಅಧ್ಯಕ್ಷ ಎಂ.ಚಿನ್ನಸ್ವಾಮಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಐಇಐನ ಅಧ್ಯಕ್ಷ ಸಿಸಿರ್ ಕುಮಾರ್ ಬ್ಯಾನರ್ಜಿ ಮತ್ತು ಮಾಜಿ ಅಧ್ಯಕ್ಷ ನವೀನಚಂದ್ರ ಬಿ.ವಸೋಯ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಸಂಸ್ಥೆಯ ಬೆಳವಣ ಗೆಯಲ್ಲಿ ಅಪಾರವಾಗಿ ಶ್ರಮಿಸಿದ ಸಂಸ್ಥೆಯ ಎಲ್ಲಾ ಅಧ್ಯಕ್ಷರು, ಗೌರವ ಕಾರ್ಯದರ್ಶಿಗಳು ಮತ್ತು ಸದಸ್ಯರನ್ನು ಗೌರವಿಸಲಾಗುವುದು ಎಂದು ಶುಕ್ರವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೊಷ್ಠಿಯಲ್ಲಿ ತಿಳಿಸಿದರು. ಗೌರವ ಕಾರ್ಯದರ್ಶಿ ಬಿ.ವಿ.ರವೀಂದ್ರನಾಥ್, ಸಂಚಾಲಕ ಕೆ.ಬಿ.ಭಾಸ್ಕರ್ ಉಪಸ್ಥಿತರಿದ್ದರು.

Translate »