ಚಾಮರಾಜನಗರ: ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ನ.10ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕರಿನಂಜನಪುರ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು. ಜಿಪಂ ಅಧ್ಯಕ್ಷೆ ಶಿವಮ್ಮ, ಸಂಸದ ಆರ್. ಧ್ರುವನಾರಾಯಣ, ಶಾಸಕರಾದ ಆರ್.ನರೇಂದ್ರ, ಎನ್.ಮಹೇಶ್, ಸಿ.ಎಸ್.ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಎಸ್.ನಾಗರಾಜು, ಆರ್.ಧರ್ಮಸೇನ, ಜಿಪಂ ಉಪಾಧ್ಯಕ್ಷ ಜೆ.ಯೋಗೀಶ್, ತಾಪಂ ಅಧ್ಯಕ್ಷೆ ದೊಡ್ಡಮ್ಮ, ಉಪಾಧ್ಯಕ್ಷ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೈಸೂರಿನ ಚಿಂತಕರಾದ ಟಿ.ಗುರುರಾಜ್ ಮುಖ್ಯ ಭಾಷಣಕಾರರಾಗಿ ಆಗಮಿಸುವರು. ಬೆಳಿಗ್ಗೆ 9.30ಕ್ಕೆ ಮುಖ್ಯ ವೇದಿಕೆಯಲ್ಲಿ ಮೈಸೂರಿನ ಜûಹೀದುಲ್ಲಾ ಖಾನ್ ಮತ್ತು ತಂಡದವರಿಂದ ಖವಾಲಿ ಏರ್ಪಡಿಸಲಾಗಿದೆ.