ಇಂದು ಹಾಸನದಲ್ಲಿ ಜೆಡಿಎಸ್ ಶಾಸಕಾಂಗ ಸಭೆ
ಮೈಸೂರು

ಇಂದು ಹಾಸನದಲ್ಲಿ ಜೆಡಿಎಸ್ ಶಾಸಕಾಂಗ ಸಭೆ

September 22, 2018

ಬೆಂಗಳೂರು: ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಆಪರೇಷನ್ ಕಮಲ ನಡೆಸಲು ಯತ್ನಿಸುತ್ತಿದೆ ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿರುವ ಬೆನ್ನಲ್ಲೇ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ತುರ್ತಾಗಿ ನಾಳೆ (ಸೆ.22) ಹಾಸನದಲ್ಲಿ ಕರೆಯಲಾಗಿದೆ. ಹಾಸನದ ಹೊಯ್ಸಳ ರೆಸಾರ್ಟ್‍ನಲ್ಲಿ ನಾಳೆ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೆಡಿಎಸ್‍ನ ಎಲ್ಲಾ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿ ಸಲಿದ್ದಾರೆ ಎಂದು ಹೇಳಲಾಗಿದೆ. ಈ ಸಭೆಯಲ್ಲಿ ಮೈತ್ರಿ ಸರ್ಕಾರವನ್ನು ಉಳಿಸಿ ಕೊಳ್ಳುವುದು ಹೇಗೆ? ಎಂಬುದರ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೇ ವಿಧಾನ ಪರಿಷತ್ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳ ಆಯ್ಕೆ ಹಾಗೂ ನೇಮಕಾತಿ ಬಗ್ಗೆಯೂ ಸಹ ಚರ್ಚಿಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Translate »