ಇಂದು ಉದ್ಯೋಗ ಮೇಳ
ಕೊಡಗು

ಇಂದು ಉದ್ಯೋಗ ಮೇಳ

July 17, 2018

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ “ವಿಶ್ವ ಕೌಶಲ್ಯ ದಿನ”ದ ಪ್ರಯುಕ್ತ ಉದ್ಯೋಗ ಮೇಳವು ಜುಲೈ, 17 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಬಿಎಸ್‍ಎಲ್ ಇಂಡಿಯಾ, ಅರಸ್ ಕಾರ್ಸ್, ಮುತ್ತೂಟ್ ಮತ್ತಿತರ ಸಂಸ್ಥೆಗಳು ಭಾಗವಹಿಸಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣ ಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗುವಂತೆ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ತಿಳಿಸಿದ್ದಾರೆ.

Translate »