ಕರ್ನಾಟಕ ಬಂದ್‍ಗೆ ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ನಾರಾಯಣಗೌಡ ನೇತೃತ್ವದ ಕರವೇ, ಪ್ರವೀಣ್‍ಶೆಟ್ಟಿ ನೇತೃತ್ವದ ಕರವೇ, ದಲಿತ ಸಂಘಟನೆಗಳು, ಉತ್ತರ ಕರ್ನಾಟಕ ವಿವಿಧ ಸಂಘಟನೆ ಗಳು, ಮಹದಾಯಿ ಹೋರಾಟ ಸಮಿತಿ, ಓಲಾ, ಊಬರ್, ಕ್ಯಾಬ್ ಅಸೋಸಿ ಯೇಷನ್, ಆಟೋ -ಟ್ಯಾಕ್ಸಿ ಅಸೋಸಿ ಯೇಷನ್, ಬೀದಿ ಬದಿ ವ್ಯಾಪಾರಿಗಳ ಸಂಘಟನೆ, ಖಾಸಗಿ ಟೂರಿಸ್ಟ್ ಮತ್ತು ಲಾರಿ ಮಾಲೀಕರ ಸಂಘಟನೆ, ಖಾಸಗಿ ಬಸ್ ಮಾಲೀಕರ ಸಂಘ ಸೇರಿದಂತೆ 25ಕ್ಕೂ ಹೆಚ್ಚು ಸಂಘ ಟನೆಗಳು ಕರ್ನಾ ಟಕ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿವೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಬಂದ್ ಅನ್ನು ಬೆಂಬಲಿ ಸುತ್ತಿದ್ದು, ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಮತ್ತು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇ ಗೌಡ ಈಗಾಗಲೇ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ವಿವಿಧೆಡೆ ಸಂಘಟನೆಗಳು ನಾಳೆ ಪ್ರತಿ ಭಟನೆ ನಡೆಸಲಿದ್ದು, ಬಿಎಂಟಿಸಿ ಬಸ್‍ಗಳ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇದೆ. ನಾಳೆ ಕೆಎಸ್‍ಆರ್ ಟಿಸಿ ಮತ್ತು ಬಿಎಂಟಿಸಿ ಬಸ್‍ಗಳನ್ನು ರಸ್ತೆಗಿಳಿಸಿದರೆ, ಅದನ್ನು ತಡೆಯಲು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ತಡೆ ನಡೆಸಲು ಸಂಘಟನೆಗಳು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಹೋಟೆಲ್ ಮಾಲೀಕರು ಬಂದ್‍ಗೆ ನೈತಿಕ ಬೆಂಬಲ ಮಾತ್ರ ನೀಡುತ್ತಿದ್ದು, ಹೋಟೆಲ್ ಗಳು ಎಂದಿನಂತೆ ತೆರೆದಿರುತ್ತವೆ ಎಂದು ರಾಜ್ಯ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದ್ದಾರೆ. ಪೆಟ್ರೋಲ್ ಬಂಕ್ ಮಾಲೀಕರೂ ಕೂಡ ನೈತಿಕ ಬೆಂಬಲ ಘೋಷಿ ಸಿದ್ದು, ಪೆಟ್ರೋಲ್ ಬಂಕ್‍ಗಳೂ ಕಾರ್ಯನಿರ್ವಹಿಸಲಿವೆ. ಕೆಎಸ್‍ಆರ್‍ಟಿಸಿ ಬಸ್ ಸಂಚಾರ ಇರುತ್ತದೆ ಎಂದು ಈಗಾಗಲೇ ಕೆಎಸ್‍ಆರ್‍ಟಿಸಿ ಘೋಷಿಸಿದೆ. ರೈಲು ಮತ್ತು ಮೆಟ್ರೋ ಸಂಚಾರ ಎಂದಿನಂತೆ ಇರಲಿದೆ. ಆದರೆ ರೈಲು ತಡೆದು ಪ್ರತಿಭಟಿಸಲು ಕೆಲ ಸಂಘಟನೆಗಳು ನಿರ್ಧಾರ ಕೈಗೊಂಡಿವೆ. ಸರ್ಕಾರಿ ಕಚೇರಿಗಳು ಬಂದ್ ಆಗುವುದಿಲ್ಲ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ಬ್ಯಾಂಕ್, ಅಂಚೆ ಕಚೇರಿ ಸೇವೆ ನಾಳೆ ಲಭ್ಯವಿದೆ. ಅಗತ್ಯ ಸೇವೆಗಳಾದ ಪತ್ರಿಕೆ, ಹಾಲು ಸರಬರಾಜು, ಹಣ್ಣು-ತರಕಾರಿ ಮಾರಾಟ ಇರಲಿವೆ. ವೈದ್ಯಕೀಯ ಸೇವೆಗಳಾದ ಆಸ್ಪತ್ರೆಗಳು ಕಾರ್ಯ ನಿರ್ವಹಿಸಲಿದ್ದು, ಮೆಡಿಕಲ್ ಶಾಪ್‍ಗಳು ತೆರೆದಿರುತ್ತವೆ. ಬೆಂಗಳೂರಿನ ಮಾಲ್ ಅಸೋಸಿ ಯೇಷನ್ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿರುವುದರಿಂದ ಮಾಲ್‍ಗಳು ಮುಚ್ಚಿರುತ್ತವೆ.
ಎಂದಿನಂತೆ ಸರ್ಕಾರಿ ಬಸ್ ಸಂಚಾರ
ಬೆಂಗಳೂರು, ಸೆ.27- ಕೆಲವು ಸಂಘ ಟನೆಗಳು ನಾಳೆ (ಸೋಮ ವಾರ) ಬಂದ್‍ಗೆ ಕರೆ ಕೊಟ್ಟಿ ರುವುದರಿಂದ ರಾಜ್ಯಾದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿ ಸಾಗುವಂತಾ ಗಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳ ಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು
ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಎಂದಿನಂತೆ ಬಸ್ ಸಂಚಾರ ಮುಂದು ವರೆಯಲಿದೆ. ಜನತೆಗೆ ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಬಂದ್ ಹಿನ್ನೆಲೆಯಲ್ಲಿ ಬಸ್ಸುಗಳಿಗೆ ಮತ್ತು ಇತರ ಸರ್ಕಾರಿ ಆಸ್ತಿಪಾಸ್ತಿಗಳಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗ ದಂತೆ ಹೆಚ್ಚಿನ ಸುರಕ್ಷತಾ ವ್ಯವಸ್ಥೆಗಳನ್ನು ಒದಗಿಸಿಕೊಡ ಬೇಕೆಂದು ಈಗಾಗಲೇ ಹಿರಿಯ ಪೆÇಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸೂಚನೆ ಕೊಡಲಾಗಿದೆ. ಅಷ್ಟೇ ಅಲ್ಲ ಬಸ್ಸುಗಳಿಗೆ, ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟು ಮಾಡಲು ಯಾರೇ ಯತ್ನಿಸಿದರೂ ಕೂಡ ಅವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಹಿಂಜರಿಯುವುದಿಲ್ಲವೆಂದು ಅವರು ಎಚ್ಚರಿಕೆ ನೀಡಿದ್ದಾರೆ.