ಇಂದು ಲೋಕ್ ಅದಾಲತ್
ಚಾಮರಾಜನಗರ

ಇಂದು ಲೋಕ್ ಅದಾಲತ್

September 8, 2018

ಚಾಮರಾಜನಗರ: ರಾಷ್ಟ್ರೀಯ ಸೇವಾ ಪ್ರಾಧಿಕಾರದ ನಿರ್ದೇಶನದಂತೆ ರಾಷ್ಟ್ರಾದ್ಯಂತ ಲೋಕ್ ಅದಾಲತ್ ಹಮ್ಮಿಕೊಂಡಿದ್ದು, ಜಿಲ್ಲೆ ಯಲ್ಲೂ ಸಹ ಸೆ.8ರಂದು ಲೋಕ್ ಅದಾ ಲತ್‍ನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷೆನ್ಸ್ ನ್ಯಾಯಾಧೀಶ ಜಿ.ಬಸವರಾಜ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯ ಅವರಣ ದಲ್ಲಿರುವ ವ್ಯಾಜ್ಯಪೂರ್ವ ಪರಿಹಾರ ಕೇಂದ್ರ ದಲ್ಲಿ ಸುದ್ದಿಗೋಷ್ಠಿಯಲ್ಲಿ ಲೋಕ್ ಅದಾ ಲತ್ ಕುರಿತು ವಿವರ ನೀಡಿದರು. ಚಾಮ ರಾಜನಗರ, ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೇಗಾಲಕ್ಕೆ ಸಂಬಂಧಿಸಿದಂತೆ ಒಟ್ಟು 10 ಬೈಠಕ್‍ಗಳಿಗೆ ಸಂಧಾನಕಾರರನ್ನು ನೇಮಿಸಿ ಅ ಮೂಲಕ ಆಯಾ ನ್ಯಾಯಾಲ ಯದ ಅವರಣದಲ್ಲಿ ಲೋಕ್ ಅದಾಲತ್ ನಡೆಸಲಾಗುತ್ತದೆ. ಯಳಂದೂರಿಗೆ ನ್ಯಾಯಾ ಧೀಶರು ನೇಮಕವಾಗದಿರುವ ಹಿನ್ನಲೆಯಲ್ಲಿ ಅಲ್ಲಿಗೆ ಸಂಬಂಧಿಸಿದ ಲೋಕ್ ಅದಾಲತ್ ಪ್ರಕರಣಗಳನ್ನು ಚಾಮರಾಜನಗರದಲ್ಲಿಯೇ ಕೈಗೆತ್ತಿಕೊಳ್ಳಲಾಗುತ್ತದೆ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿಯವರಾದ ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಇಂದು ಶೇಖರ್, ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

Translate »