ಇಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಮುಖ್ಯಮಂತ್ರಿ ಕುಮಾರಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ
ಮೈಸೂರು

ಇಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಮುಖ್ಯಮಂತ್ರಿ ಕುಮಾರಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ

February 2, 2019

ಮೈಸೂರು: ಜಾತ್ರಾ ಮಹೋತ್ಸವದ ಅಂಗವಾಗಿ ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಾಳೆ (ಫೆ.2) ನಡೆಯಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಉದ್ಘಾಟಿಸುವರು.

ಬೆಂಗಳೂರಿನಿಂದ ಇಂದು ರಾತ್ರಿ ವಿಶೇಷ ವಿಮಾನ ದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಗಳು, ಮೈಸೂರಲ್ಲಿ ರಾತ್ರಿ ವಾಸ್ತವ್ಯ ಹೂಡಿ, ಶನಿವಾರ ಬೆಳಿಗ್ಗೆ ರಸ್ತೆ ಮಾರ್ಗ ವಾಗಿ ಸುತ್ತೂರಿಗೆ ತೆರಳುವರು ಎಂದು ದಕ್ಷಿಣ ವಲಯ ಐಜಿಪಿ ಕೆ.ವಿ. ಶರತ್‍ಚಂದ್ರ ‘ಮೈಸೂರು ಮಿತ್ರ’ನಿಗೆ ತಿಳಿಸಿದ್ದಾರೆ. ಸುತ್ತೂರು ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮೈಸೂರಿಗೆ ಬಂದು ಮಧ್ಯಾಹ್ನ 12.30 ಗಂಟೆಗೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹಿಂದಿರುಗುವರು ಎಂದು ಐಜಿಪಿಯವರು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಅವರು ಅಧ್ಯಕ್ಷತೆ ವಹಿಸುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಇನ್‍ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಪ್ರದ್ಮಶ್ರೀ ಡಾ.ಸುಧಾ ಮೂರ್ತಿ ಅವರು ಮಾಂಗಲ್ಯ ವಿತರಿಸಲಿದ್ದು, ರಾಜಮಾತೆ ಪ್ರಮೋದಾ ದೇವಿ ಒಡೆಯರ್ ನವದಂಪತಿಗಳಿಗೆ ಪ್ರತಿಜ್ಞಾವಿಧಿ ಬೋಧಿಸುವರು. ಸಚಿವರಾದ ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸುವರು.

Translate »