ಇಂದು ವಿದ್ಯುತ್ ವ್ಯತ್ಯಯ
ಕೊಡಗು

ಇಂದು ವಿದ್ಯುತ್ ವ್ಯತ್ಯಯ

September 18, 2018

ಮಡಿಕೇರಿ: ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿದ್ದು, ಸೆ.18 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ, ವಿರಾಜಪೇಟೆ, ಬಿ.ಶೆಟ್ಟಗೇರಿ, ಬೇತ್ರೀ, ಕಡಂಗಮರೂರು, ಕಾಕೋಟು ಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಅಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಇಇ ಸೋಮಶೇಖರ ಕೋರಿದ್ದಾರೆ.

Translate »