ಇಂದು ರಾಜ್ಯಕ್ಕೆ ರಾಹುಲ್ ಭೇಟಿ
ಮೈಸೂರು

ಇಂದು ರಾಜ್ಯಕ್ಕೆ ರಾಹುಲ್ ಭೇಟಿ

August 13, 2018

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಸ್ಟ್ 13 ರಂದು ಕರ್ನಾ ಟಕಕ್ಕೆ ಭೇಟಿ ನೀಡ ಲಿದ್ದಾರೆ. ರಾಜ್ಯ ದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿ ತ್ವಕ್ಕೆ ಬಂದ ಬಳಿಕ ಮೊದಲ ಬಾರಿಗೆ ಅವರು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಆಗಸ್ಟ್ 13ರ ಸೋಮ ವಾರ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಬೀದರ್‍ನಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿ ದ್ದಾರೆ. 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಜನರಿಗೆ ಕೃತಜ್ಞತೆ ಸಲ್ಲಿಸಲಿ ದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಭೇಟಿ ಬಗ್ಗೆ ಚರ್ಚೆ ನಡೆದಿದ್ದು, ಸಮಾ ವೇಶವನ್ನು ಯಶಸ್ವಿಗೊಳಿಸಲು ಎಲ್ಲಾ ನಾಯಕರು ತೀರ್ಮಾನ ಕೈಗೊಂಡಿದ್ದಾರೆ. ಬೀದರ್ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ
ತವರು ಜಿಲ್ಲೆಯಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ರಾಹುಲ್ ಗಾಂಧಿ 20ಕ್ಕೂ ಹೆಚ್ಚು ದಿನಗಳ ಕಾಲ ರಾಜ್ಯದಲ್ಲಿ ಸಂಚಾರ ನಡೆಸಿದ್ದರು. ಈಗ ಚುನಾವಣೆ ಮುಗಿದು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ, ಹೊಸ ಕೆಪಿಸಿಸಿ ಅಧ್ಯಕ್ಷರ ನೇಮಕವಾದ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿದ ಜನರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಕರ್ನಾಟಕದ ಕಾಂಗ್ರೆಸ್ ನಾಯಕರೊಂದಿಗೆ 2019ರ ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚೆ ನಡೆಸಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಆದ್ದರಿಂದ, ಹೆಚ್ಚಿನ ಕ್ಷೇತ್ರಗಳಲ್ಲಿ ಜಯಗಳಿಸಬೇಕು ಎಂದು ರಾಹುಲ್ ನಾಯಕರಿಗೆ ಸೂಚನೆ ನೀಡಲಿದ್ದಾರೆ.

Translate »