ಇಂದು ಶ್ರೀಕಂಠೇಶ್ವರಸ್ವಾಮಿ  ಪಂಚ ಮಹಾರಥೋತ್ಸವ
ಮೈಸೂರು

ಇಂದು ಶ್ರೀಕಂಠೇಶ್ವರಸ್ವಾಮಿ ಪಂಚ ಮಹಾರಥೋತ್ಸವ

March 16, 2022

ನಂಜನಗೂಡು, ಮಾ.15- ದಕ್ಷಿಣಕಾಶಿ ನಂಜನ ಗೂಡಿನ ಶ್ರೀಕಂಠೇಶ್ವರಸ್ವಾಮಿ ಪಂಚ ಮಹಾರಥೋ ತ್ಸವ ನಾಳೆ(ಮಾ.16) ಮುಂಜಾನೆ 3.30 ರಿಂದ 4.30 ರೊಳಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಡೆಯಲಿದೆ.

ಕೊರೊನಾ ಕಾರಣದಿಂದ ಕಳೆದ ಎರಡು ವರ್ಷ ಗಳಿಂದ ದೇವಾಲಯದ ಒಳಾವರಣಕ್ಕೆ ಮಾತ್ರ ಸೀಮಿತ ವಾಗಿ ಭಕ್ತರ ಪಾಲಿಗೆ ಮರೀಚಿಕೆಯಾಗಿದ್ದ ದೊಡ್ಡ ಜಾತ್ರೋತ್ಸವವನ್ನು ಈ ಬಾರಿ ಅದ್ಧೂರಿಯಾಗಿ ಆಚರಿ ಸಲು ದೇವಾಲಯ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ ನಡೆಸಲಾಗಿದೆ. ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ಅವರ ಅನುಕೂಲಕ್ಕಾಗಿ ಮೂಲ ಸೌಕರ್ಯ ಒದಗಿಸಲು ದೇವಾಲಯದ ಕಾರ್ಯ ನಿರ್ವಾ ಹಕ ಅಧಿಕಾರಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ 77 ಲಕ್ಷ ರೂ. ವೆಚ್ಚದಲ್ಲಿ ಸಕಲ ಸಿದ್ಧತೆ ಕೈಗೊಂಡಿದ್ದಾರೆ.

ದೇವರಿಗೆ ವಿಶೇಷ ಪೂಜೆ: ಪ್ರಧಾನ ಆಗಮಿಕರಾದ ನಾಗಚಂದ್ರ ದೀಕ್ಷಿತರು, ನೀಲಕಂಠ ದೀಕ್ಷಿತರು, ವಿಶ್ವನಾಥ ದೀಕ್ಷಿತರು ಸ್ಥಳ ಪುರೋಹಿತ ಸಪ್ತರ್ಷಿ ಜೋಯಿಸರು ಸೇರಿದಂತೆ ದೇವಾಲಯದ ಅರ್ಚಕರು ಮಂಗಳವಾರ ಮಧ್ಯರಾತ್ರಿ 12 ಗಂಟೆಗೆ ಸರಿಯಾಗಿ ಜಾತ್ರೋತ್ಸವದ ಪೂಜಾ ಕೈಂಕರ್ಯಗಳಾದ ಈಶ್ವರನ ಶಿರದಿಂದ ಪಾದವರಿಗೆ ವಿವಿಧ ಹೋಮ-ಹವನಗಳ ಮೂಲಕ ಅರ್ಚನೆ ಮಾಡಿ ನಂತರ ಪಾರ್ವತಿ, ಗಣಪತಿ ಹಾಗೂ ಸುಬ್ರಹ್ಮಣ್ಯ ಮತ್ತು ಚಂಡಿಕೇಶ್ವರಿಗೂ ಹೋಮ ಹವನಗಳ ಮೂಲಕ ಪೂಜೆ ಸಲ್ಲಿಸಿದ್ದಾರೆ.

ಗೌತಮ ಮಹರ್ಷಿಗಳು ಸ್ಥಾಪಿಸಿದ ರಥ: ನಂತರ ಮಕರ ಲಗ್ನದಲ್ಲಿ ಕೃತಯುಗದ ಗೌತಮ ಮಹರ್ಷಿಗಳು ಸ್ಥಾಪಿಸಿದ್ದಾರೆ ಎಂದು ಪ್ರತೀತಿಯುಳ್ಳ ಗೌತಮ ನಾಮ ಧೇಯದ ಚತುರ್ಮುಖ ಬ್ರಹ್ಮನೇ ಚಾಲನಾ ಸ್ಥಾನದಲ್ಲಿ ರುವ ರಥಕ್ಕೆ ಮತ್ತೆ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಪೂಜೆ ಅರ್ಪಿಸಿ ಶ್ರೀಕಂಠೇಶ್ವರನನ್ನು ಪ್ರತಿಷ್ಠಾಪಿ ಸುವುದರೊಂದಿಗೆ ಅಧಿಕೃತವಾಗಿ ದೊಡ್ಡ ಜಾತ್ರೆ ರಥೋತ್ಸವದ ಚಾಲನೆಗೆ ನಾಂದಿ ಹಾಡಲಾಗುತ್ತದೆ. ಶ್ರೀಕಂಠೇಶ್ವರನ ರಥಾರೋಹಣವಾಗುತ್ತಿದ್ದಂತೆ ಆತನ ಪರಿವಾರದ ತಾಯಿ ಪಾರ್ವತಿ, ಗಣಪತಿ, ಸುಬ್ರಮಣ್ಯ ಹಾಗೂ ಚಂಡಿಕೇಶ್ವರನ ರಥಾರೋಹಣ ವಿಧಿವತ್ತಾಗಿ ಸಂಪ್ರದಾಯಕ ಬದ್ಧವಾಗಿ ನಡೆಯಲಿದೆ.

80 ಅಡಿ ಎತ್ತರ, 110 ಟನ್ ತೂಕ ಭವ್ಯ ರಥ: ಅತ್ಯಂತ ಪುರಾತನವಾದ ಸುಮಾರು 80 ಅಡಿ ಎತ್ತರದ 110 ಟನ್ ತೂಕದ ಈ ಗೌತಮ ರಥದಲ್ಲಿ ಪವಡಿಸುವ ನಂಜುಂಡೇಶ್ವರ ರಥ ಪ್ರಯಾಣ ದೇವಾಲಯದ ಮುಂಭಾಗದಿಂದ ಆರಂಭವಾಗಿ ಬಲಭಾಗದ ರಾಷ್ಟ್ರಪತಿ ರಸ್ತೆಯ ರಾಕ್ಷಸ ಮಂಟಪದ ಮೂಲಕ ಮಹಾತ್ಮಾ ಗಾಂಧಿ ರಸ್ತೆಯಲ್ಲಿ ಸಾಗಿ ದೇವಾಲಯದ ಎಡ ಭಾಗಕ್ಕೆ ಬರುವುದರೊಂದಿಗೆ ಶ್ರೀಕಂಠೇಶ್ವರ ದೊಡ್ಡ ತೇರು ನೆಲೆ ಸೇರಿದಂತಾಗುತ್ತದೆ.

ರಥೋತ್ಸವ ನೋಡುವುದೇ ಒಂದು ಭಾಗ್ಯ: ಆರಂಭ ದಲ್ಲಿ ಗಣಪತಿ ನಂತರ ಕ್ರಮವಾಗಿ ಶ್ರೀಕಂಠೇಶ್ವರ, ಪಾರ್ವತಿ, ಸುಬ್ರಹ್ಮಣ್ಯ ಮತ್ತು ಚಂಡಿಕೇಶ್ವರ ಸೇರಿದಂತೆ ಪಂಚರಥಗಳ ಮಿಣಿ ಹಿಡಿದು ಉಘೇ ನಂಜುಂಡೇಶ್ವರ ಎಂದು ಬಹು ಪರಾಕಿನೊಡನೆ ರಥಬೀದಿಯಲ್ಲಿ ರಥವನ್ನು ಎಳೆದೊಯ್ಯುತ್ತಿದ್ದರೆ 80 ಅಡಿ ಎತ್ತರದ ಭವರೋಗ ವೈದ್ಯ ಹಕಿಂ ನಂಜುಂಡೇಶ್ವರ ಪವಡಿಸಿದ ಗೌತಮ ರಥ ಬೀದಿಯುದ್ದಕ್ಕೂ ಬಳುಕುತ್ತ ಬಾಗುತ್ತ ಸಾಗುವ ವೈಭವವನ್ನು ನೋಡುವುದೇ ಒಂದು ಚೆಂದ.

ಅರವಟ್ಟಿಗೆ ಜಾತ್ರೋತ್ಸವ: ದೊಡ್ಡ ಜಾತ್ರೆ ಅರವಟ್ಟಿಗೆ ಗಳ ಜಾತ್ರೆಯೂ ಹೌದು. ಶ್ರೀಕಂಠೇಶ್ವರನ ಜಾತ್ರೆಗೆ ಆಗಮಿಸುವ ಭಕ್ತರಿಗಾಗಿ ಆತನ ಭಕ್ತ ಸಮೂಹ ಮಾರು ಮಾರಿಗೆ ನೀರು, ಮಜ್ಜಿಗೆ, ಬೇಲದ, ಹಣ್ಣಿನ ಪಾನಕ, ಸಿಹಿ ತಿನಿಸುಗಳು, ಚಿತ್ರಾನ್ನ, ಮೊಸರನ್ನ, ಬಿಸಿಬೇಳೆ ಬಾತ್, ಪುಳಿಯೋಗರೆ ಸೇರಿದಂತೆ ಹಣ್ಣು ಹಂಪಲ ಗಳನ್ನು ನೀಡಿ ಅವರ ಹೊಟ್ಟೆ ತುಂಬಿಸುವ ಅರವಟ್ಟಿಗೆಗಳು ಈ ಜಾತ್ರೆಯ ಇನ್ನೊಂದು ಮುಖವೇ ಆಗಿದೆ.

Translate »