ಇಂದು ಅ.ಭಾ.ವೀ. ಮಹಾಸಭಾದ ಸಂಸ್ಥಾಪಕ  ಶ್ರೀ ಹಾನಗಲ್ಲ ಕುಮಾರಸ್ವಾಮೀಜಿ ಜಯಂತಿ
ಮೈಸೂರು

ಇಂದು ಅ.ಭಾ.ವೀ. ಮಹಾಸಭಾದ ಸಂಸ್ಥಾಪಕ ಶ್ರೀ ಹಾನಗಲ್ಲ ಕುಮಾರಸ್ವಾಮೀಜಿ ಜಯಂತಿ

September 26, 2021

ಮೈಸೂರು, ಸೆ.25(ಎಂಟಿವೈ)-ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆಯ ಆವರಣ ದಲ್ಲಿರುವ ಶ್ರೀ ಶಿವರಾತ್ರಿ ರಾಜೇಂದ್ರ ಭವನದಲ್ಲಿ ಸೆ.26ರಂದು ಸಂಜೆ 5ಕ್ಕೆ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಸಂಸ್ಥಾಪಕರಾದ ಶ್ರೀ ಹಾನಗಲ್ಲ ಕುಮಾರಸ್ವಾಮೀಜಿ ಅವರ 154ನೇ ಜಯಂತಿ ಮಹೋ ತ್ಸವ ಆಯೋಜಿಸಲಾಗಿದೆ ಎಂದು ವೀರ ವನಿತೆ ರಾಣಿ ಚೆನ್ನಮ್ಮ ಸ್ವಯಂ ಸೇವಾ ಸಂಘದ ನಿರ್ದೇಶಕ ಎಂ.ಚಂದ್ರಶೇಖರ್ ತಿಳಿಸಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೀರವನಿತೆ ರಾಣಿ ಚೆನ್ನಮ್ಮ ಸ್ವಯಂ ಸೇವಾ ಸಂಘ, ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಹಾಗೂ ಜಿಲ್ಲಾ ಯುವ ಘಟಕದ ಸಹಯೋಗದಲ್ಲಿ ವೀರಶೈವ ಮಹಾಸಭಾದ ಸಂಸ್ಥಾಪಕ ಶ್ರೀ ಹಾನಗಲ್ಲ ಕುಮಾರಸ್ವಾಮೀಜಿ ಅವರ ಜಯಂತಿ ಮಹೋತ್ಸವ ಆಯೋಜಿಸಲಾಗಿದೆ. ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸುವ ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಬಿ.ವೈ. ಅರುಣಾದೇವಿ ಉದಯ್‍ಕುಮಾರ್ ಉದ್ಘಾಟಿಸಲಿದ್ದಾರೆ. ಶೈವ ಸಂಶೋಧನಾ ಸಂಸ್ಥೆಯ ನಿದೇರ್ಶಕ ಡಾ.ಶ್ರೀ ಶರತ್ ಚಂದ್ರಸ್ವಾಮೀಜಿ ಮುಖ್ಯ ಭಾಷಣ ಮಾಡುವರು. ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಯುವಕ ಘಟಕದ ರಾಜ್ಯಾಧ್ಯಕ್ಷ ಬಿ.ಮನೋಹರ ಅಬ್ಬಿಗೆರೆ, ಮುಡಾ ಆಯುಕ್ತ ಡಾ.ಡಿ.ಬಿ.ನಟೇಶ್ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಮೇಯರ್ ಸುನಂದಾ ಪಾಲನೇತ್ರ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಸ್.ಪರಮಶಿವಯ್ಯ ಅವರನ್ನು ಅಭಿನಂದಿಸ ಲಾಗುವುದು ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಯುವ ಘಟಕದ ರಾಜ್ಯ ಸದಸ್ಯ ವೀರೂಪಶಾ, ಯುವ ಘಟಕದ ಜಿಲ್ಲಾಧ್ಯಕ್ಷ ಮೂರ್ತಿ, ಪ್ರಧಾನ ಕಾರ್ಯದರ್ಶಿ ಗುರುಸ್ವಾಮಿ, ವೀರ ವನಿತೆ ರಾಣಿ ಚೆನ್ನಮ್ಮ ಸ್ವಯಂ ಸೇವಾ ಸಂಘದ ನಿರ್ದೇಶಕ ಮಹಾದೇವಪ್ರಸಾದ್ ಇದ್ದರು.

Translate »