ಇಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಮಹತ್ವದ ಸಭೆ
ಮೈಸೂರು

ಇಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಮಹತ್ವದ ಸಭೆ

July 1, 2018
  • ಶಾಂತಿವನದ ಬೆಳವಣಿಗೆ ನಂತರ ಹಾಲಿ-ಮಾಜಿ ಸಿಎಂ ಮುಖಾಮುಖಿ

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗುವ ಮುನ್ನಾ ದಿನ ಅಂದರೆ ನಾಳೆ(ಜು.1) ಸಂಜೆ 4.30ಕ್ಕೆ ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಸಭೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸಂಸದ ಎಂ. ವೀರಪ್ಪ ಮೊಯ್ಲಿ ಅಧ್ಯಕ್ಷತೆಯ ಮೈತ್ರಿ ಸರ್ಕಾರದ ಸಾಮಾನ್ಯ ಕನಿಷ್ಟ ಕಾರ್ಯಕ್ರಮ ಸಮಿತಿ ನೀಡಿರುವ ವರದಿಯನ್ನಾಧರಿಸಿ ಬಜೆಟ್ ರೂಪರೇಷೆಗಳು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ.
ಬಜೆಟ್ ಮಂಡನೆ ರೈತರ ಸಾಲಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಭಿನ್ನಾಭಿಪ್ರಾಯವಿದೆ. ಸಿದ್ದರಾಮಯ್ಯ ಅವರು, ಧರ್ಮಸ್ಥಳದ ಶಾಂತಿವನದಲ್ಲಿ ತಮ್ಮ ಆಪ್ತರೊಂದಿಗೆ ಆಕ್ಷೇಪ ವ್ಯಕ್ತಪಡಿಸಿದ ವಿಡಿಯೋ ವೈರಲ್ ಆಗಿರುವ ಕಾರಣ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವೆ ಭಾಂದವ್ಯ ಅಷ್ಟೇನು ಸರಿಯಿಲ್ಲ ಎಂಬ ಸಂದೇಶ ಈಗಾಗಲೇ ಉಭಯ ಪಕ್ಷಗಳ ಮುಖಂಡರಿಗೂ ರವಾನೆಯಾಗಿದೆ. ಈ ಹಿನ್ನಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್‍ನ ಕರ್ನಾಟಕ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಇಂದು ಸಂಜೆ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದಾರೆ.

ನಾಳೆ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮನ್ವಯ ಸಮಿತಿ ಸಭೆಯಲ್ಲಿ ಮುಖ್ಯಮಮತ್ರಿ ಹೆಚ್.ಡಿ ಕುಮಾರಸ್ವಾಮಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಜೆಡಿಎಸ್‍ನ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಭಾಗವಹಿಸಲಿದ್ದಾರೆ.

ಸಾಮಾನ್ಯ ಕನಿಷ್ಟ ಕಾರ್ಯಕ್ರಮ ಸಮಿತಿ ಸಲ್ಲಿಸಿರುವ ವರದಿಯಂತೆ 2018ರ ಮೆ. 31ಕ್ಕೆ ಅನ್ವಯವಾಗುವಂತೆ ಸಹಕಾರ ಮತ್ತು ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಪಡೆದಿರುವ ಸಾಲಮನ್ನಾ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ತೀಮಾನ ಕೈಗೊಳ್ಳಲಾಗುತ್ತದೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಮುಂದುವರಿಸಬೇಕೆಂದು ಕಾಂಗ್ರೆಸ್ ಪಟ್ಟು ಹಿಡಿಯುವ ಸಾದ್ಯತೆ ಇದೆ ಎಂದು ಹೇಳಲಾಗಿದೆ. ನಾಳಿನ ಸಮನ್ವಯ ಸಮಿತಿಯಲ್ಲಿ ಕೈಗೊಳ್ಳುವ ನಿರ್ಣಯದಂತೆ ಜು.5ರಂದು ಕುಮಾರಸ್ವಾಮಿಯವರು ಬಜೆಟ್ ಮಂಡಿಸಲು ರೂಪುರೇಷೆ ನಿರ್ಧರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Translate »